Tuesday, September 29, 2026
Menu

ನೀಟ್‌ ರದ್ದು: ಕಾಲಮಿತಿಯಲ್ಲಿ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ. ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಒಂದು

ವ್ಯಾಪಂ ಹಗರಣ ಸಂಬಂಧ 44 ಮಂದಿಯ ಕೊಲೆ, ಈ ಬಗ್ಗೆ ಸಿನಿಮಾ ಮಾಡಿ: ಧುರಂಧರ್ ನಿರ್ದೇಶಕನಿಗೆ ಸಚಿವ ಲಾಡ್ ಸಲಹೆ

ಧುರಂಧರ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಿರ್ದೇಶಕ ಆದಿತ್ಯ ಧರ್ ಅವರಿಗೆ ವ್ಯಾಪಂ ಹಗರಣದ ಬಗ್ಗೆಯೂ ಒಂದು ಸಿನಿಮಾ ಮಾಡಿ ಎಂದು ಸಚಿವ ಸಂತೋಷ್ ಲಾಡ್  ಸಲಹೆ ನೀಡಿದರು. ವ್ಯಾಪಂ ಹಗರಣ ಮುಚ್ಚಲು ಈವರೆಗೆ  44 ಜನರ ಕಗ್ಗೊಲೆ ಮಾಡಲಾಗಿದೆ ಎಂದು ಆಕ್ರೋಶ

ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಹೊಣೆ ಯಾರು

ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿ-ಅಂಶಗಳು ರಾಜ್ಯದ ಭಯಾನಕ

ಎಸ್‌ಟಿ ಮೀಸಲಾತಿ ಇಳಿಸಿ ದಲಿತರಿಗೆ ವಂಚನೆ: ಸರ್ಕಾರದ ವಿರುದ್ಧ ಆರ್‌ ಅಶೋಕ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮರಳಿ 3% ಗೆ ಇಳಿಕೆ ಮಾಡಿ ಈ ಸಮುದಾಯಕ್ಕೆ ವಂಚನೆ ಮಾಡಿದೆ. ಇದರ ವಿರುದ್ಧ ಜನಾಂದೋಲನ ನಡೆಯಲಿದ್ದು, ಬಿಜೆಪಿ ಕೂಡ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಾತನಾಡಿ: ಡಿಕೆ ಶಿವಕುಮಾರ್

“ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಕೆ ಶಿವಕುಮಾರ್  ಆಗ್ರಹಿಸಿದರು. ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್

ಕೆಆರ್‌ಎಸ್‌ ನೀರಿನ ಮಟ್ಟ 90 ಅಡಿಗೆ ಕುಸಿತ: ಬೆಂಗಳೂರಿಗೂ ಆತಂಕ

ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ಮಟ್ಟವು 90 ಅಡಿಗೆ ಕುಸಿದಿದ್ದು, ಬೆಂಗಳೂರು ನಗರ ಸೇರಿದಂತೆ ಹಳೆ ಮೈಸೂರು ಭಾಗದ ಜನರಿಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯದಲ್ಲಿ ಈಗ 90 ಅಡಿ

ಕೇಂದ್ರ ಸಚಿವರು, ಅಧಿಕಾರಿಗಳು ಸಾರ್ವಜನಿಕ ಸಾರಿಗೆ ಬಳಸಲಿ, ಬಿಜೆಪಿಯಿಂದ ತ್ಯಾಗ ಶುರುವಾಗಲಿ

“ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಿರುವ ಪ್ರಧಾನ ಮಂತ್ರಿಗಳು, ಇವುಗಳ ಬೆಲೆ ಏರಿಕೆಯಾಗಿದ್ದು ಯಾಕೆ? ಯಾರಿಂದ ಬೆಲೆ ಏರಿಕೆಯಾಗಿದೆ ಎಂಬುದನ್ನು ವಿವರಿಸಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಸರ್ಕಾರಿ ನಿವಾಸ ಕುಮಾರಪಾರ್ಕ್

ಸಂಪುಟ ಬದಲಾವಣೆ: ಹೈಕಮಾಂಡ್ ಉತ್ತರ ನೀಡಬೇಕಿದೆ ಎಂದ ಶಾಸಕ ಕೋನರಡ್ಡಿ

ಮೇ 15 ರ ನಂತರ ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ಹೈಕಮಾಂಡ್ ಹೇಳಬೇಕಿದೆ. ಕೇರಳ ಮತ್ತು ತಮಿಳುನಾಡಿನ ಸ್ಥಿತಿಗತಿ ನೋಡಿ ಹೈಕಮಾಂಡ್ ಸಿಎಂ ಅವರನ್ನು ಕರೆಯಬೇಕು. ಕರೆದು ಅವರ ಜೊತೆ ಹೈಕಮಾಂಡ್ ಮಾತಾಡಬೇಕು ಎಂದು ನವಲಗುಂದ ಶಾಸಕ ಎಚ್.ಕೋನರೆಡ್ಡಿ ಹೇಳಿದರು ಸಿಎಂ 

ಶೃಂಗೇರಿ ಮರು ಮತ ಎಣಿಕೆ ರದ್ದುಗೊಳಿಸಿದ ಸುಪ್ರೀಂ: ಕಾಂಗ್ರೆಸ್‌ನ ರಾಜೇಗೌಡ ಶಾಸಕರಾಗಿ ಮುಂದುವರಿಕೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಇತ್ತೀಚೆಗೆ ನಡೆದಿದ್ದ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿದ್ದರು. ಈಗ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.

ನಾಗಮಲೆಯಲ್ಲಿ ಬಾಲಕನ ಕೊಂದ ಚಿರತೆ: ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ರೂ. ಪರಿಹಾರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆಯಲೆಂದು ಪಾದಯಾತ್ರೆ ಮಾಡುತ್ತಿದ್ದ ಬಾಲಕನನ್ನು ನಾಗಮಲೆಯಲ್ಲಿ ಚಿರತೆ ಎಳೆದೊಯ್ದು ಕೊಂಡು ಹಾಕಿರುವ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಬಾಲಕನ ಕುಟುಂಬಕ್ಕೆ ಒಟ್ಟು 20 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ತಾಯಿ ಜೊತೆ ದರ್ಶನಕ್ಕೆ