Menu

ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಬೆಂಗಳೂರಿನಲ್ಲಿ ಮಹಜರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾತಂಡವು ಬೆಂಗಳೂರಿನಲ್ಲಿ ಮಹಜರು ಪ್ರಕ್ರಿಯೆ ಮುಂದುವರಿಸಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಎಸ್‌ಐಟಿ ಮಹಜರು ನಡೆಸುತ್ತಿದೆ. ವಿದ್ಯಾರಣ್ಯಪುರದ ಎಸ್.ಬಿ ಮ್ಯಾನ್ ಷನ್ ಸರ್ವೀಸ್ ಅಪಾರ್ಟ್ಮೆಂಟ್ ನಲ್ಲಿ ಷಡ್ಯಂತ್ರ ರೂಪಿಸಿದ ಆರೋಪ ಹಿನ್ನಲೆ ತನಿಖಾ ತಂಡ ಮಹಜರು ಕೈಗೊಂಡಿದೆ. 4-5 ತಿಂಗಳ ಹಿಂದೆ ಈ ಸರ್ವಿಸ್ ಅಪಾರ್ಟ್‌ಮೆಂಟ್ ಗೆ ಚಿನ್ನಯ್ಯ ಮತ್ತು ತಂಡ ಬಂದಿತ್ತು , ಗಿರೀಶ್

ಅಮೆರಿಕ “ನಾವಿಕ” ದಲ್ಲಿ ಕೆಎಂಎಫ್‌ನ ನಂದಿನಿ ಕಲರವ

ಕನ್ನಡ ನಾಡಿನ ಹೆಮ್ಮೆಯ ಕೆಎಂಎಫ್ ನಂದಿನಿ ಬ್ರಾಂಡಿನ ಎಲ್ಲ ಉತ್ಪನ್ನಗಳನ್ನು ಅಮೆರಿಕ ದೇಶದ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ಅಧಿಕೃತವಾಗಿ ಇಂದು ನಡೆದ ನಾವಿಕ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ನಂದಿನಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಿಹಿ ತಿಂಡಿಗಳು ಸೇರಿದಂತೆ ಎಲ್ಲಾ

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ:  ಡಿಕೆ ಶಿವಕುಮಾರ್

“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ 

ಮುದ್ರಾಂಕ ಶುಲ್ಕ ಕರ್ನಾಟಕದಲ್ಲೇ ಕಡಿಮೆ: ಆಯುಕ್ತ ಮುಲೈ ಮುಗಿಲನ್ ಸಮರ್ಥನೆ

ಬೆಂಗಳೂರು: ಆಗಸ್ಟ್ 31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಪರಿಷ್ಕೃತ ಶುಲ್ಕ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಸಮರ್ಥಿಸಿಕೊಂಡಿದ್ದಾರೆ. ಆಗಸ್ಟ್ 31ರಿಂದ

ಸೆಪ್ಟೆಂಬರ್ 1ರಿಂದ ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಮುಳ್ಳಯ್ಯನಗಿರಿ ಪ್ರವೇಶ

ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ ಹೊಸ ನಿಯಮ ಜಾರಿಗೆ ತಂದಿದೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದು ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುವುದರಿಂದ ಉಂಟಾಗುವ ಸಂಚಾರಿ ದಟ್ಟಣೆ ತಗ್ಗಿಸಲು

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ: ಹಂದಿ ಸಾಗಾಟ ನಿಷೇಧ

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ ಕರ್ನಾಟಕದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದು, ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹಂದಿ ಸಾಗಾಟ ನಿಷೇಧಿಸಲಾಗಿದೆ. ಆಗಸ್ಟ್ 19ರಿಂದ 10 ದಿನಗಳ ಅಂತರದಲ್ಲಿ ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ

ನಾಡಹಬ್ಬ ದಸರಾ ಸಂಭ್ರಮ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ  ಆರ್‌. ಅಶೋಕ ಐದು ಪ್ರಶ್ನೆಗಳು

ನಾಡಹಬ್ಬ ದಸರಾ ಸಂಭ್ರಮಕ್ಕೆ ವಿವಾದದ ಮಸಿ ಬಳಿದಿರುವ ಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನನ್ನ 5 ಪ್ರಶ್ನೆಗಳನ್ನು ಕೇಳುತ್ತಿರುವುದಾಗಿ  ಪ್ರತಿಪಕ್ಷ ನಾಯಕ ಆರ್‌. ಅಶೋಕ್‌  ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ  ಬರೆದುಕೊಂಡಿದ್ದು, ಆ ಪ್ರಶ್ನೆಗಳು ಹೀಗಿವೆ, *ಇಷ್ಟಕ್ಕೂ ಬಾನು ಮುಷ್ತಾಕ್ ಅವರ ಕೈಯಲ್ಲಿ

ಸುಜಾತ ಭಟ್‌ಗೆ ಎಸ್‌ಐಟಿ ಭದ್ರತೆ ಒದಗಿಸಬೇಕು, ಮಹಿಳೆಯರ ಘನತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಮಹಿಳಾ ಆಯೋಗ

ಮಹಿಳೆಯರ ಘನತೆಗೆ ಯಾರೇ ಧಕ್ಕೆ ತಂದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಎಚ್ಚರಿಕೆ ನೀಡಿದ್ದಾರೆ. ಅನನ್ಯಾ ಭಟ್ ಅವರ ತಾಯಿ ‘ಪದೇ ಪದೆ ಪ್ರಶ್ನೆ ಮಾಡಿದರೆ ನಾನು ನೇಣು

ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ

ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್​.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ