Menu

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮಕ್ಕೆ ಸಂಕಷ್ಟ : ಆರ್ ಅಶೋಕ್

ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ. ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ

ಚನ್ನರಾಯಪಟ್ಟಣದಲ್ಲಿ 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯಾಧಿಕಾರಿಗಳು ಹಾಸನದ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15

ಕಲಬುರಗಿಯಲ್ಲಿ ಶಾಲಾ ಪುಸ್ತಕ ದಾಸ್ತಾನಿಗೆ ಬೆಂಕಿ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಶಾಲೆಗಳಿಗೆ ಸರಬರಾಜು ಮಾಡಲು ಇಡಲಾಗಿದ್ದ ಪುಸ್ತಕ ದಾಸ್ತಾನಿಗೆ ಬೆಂಕಿ ಬಿದ್ದು ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಗೂ ಹಳೆಯ ಶಾಲಾ ಸಮವಸ್ತ್ರಗಳು ಬೆಂಕಿಗಾಹುತಿಯಾಗಿವೆ. 4ನೇ ತರಗತಿಯಿಂದ 8ನೇ ತರಗತಿ ಕನ್ನಡ ಮಾಧ್ಯಮದ ಪುಸ್ತಕಗಳು

ಕನ್ನಡಿಗರಿಗೆ ಅವಮಾನಿಸಿದ ಜಿಎಸ್‌ ಸೂಟ್‌ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಅರೆಸ್ಟ್‌

ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸಿ ಬರಹ ಪ್ರದರ್ಶನ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಕೋರಮಂಗಲದ ಜಿ.ಎಸ್‌ ಸೂಟ್‌ ಹೋಟೆಲ್‌ ಅನ್ನು ಸೀಜ್‌ ಮಾಡಲಾಗಿದ್ದು, ಮ್ಯಾನೇಜರ್‌ ಸರ್ಫಜ್‌ ಎಂಬಾತನನ್ನು ಬಂಧಿಸಲಾಗಿದೆ. ಮ್ಯಾನೇಜರ್‌ನನ್ನು ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ

ಭೂ ಕಬಳಿಕೆ ಕುರಿತು ಮಾತಾಡ್ಬೇಕು ಅಂದ್ರೆ ಉತ್ತರಹಳ್ಳಿ ಬಗ್ಗೆ ಮಾತಾಡ್ಬೇಕಾಗುತ್ತೆ ಎಂದ ಡಿಕೆ ಸುರೇಶ್‌

“ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಭೂ ಕಬಳಿಕೆ ಕುರಿತು ನಾನು ಮಾತನಾ ಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ”

ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ  ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ

ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿ‌ನಿಧಿ ಡಿಡಿ ಹಸ್ತಾಂತರ

ಮೈಸೂರು: ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿ‌ನಿಧಿ  ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ

ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ

ಬೆಂಗಳೂರು: ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ

ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ