ರಾಜ್ಯ
ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್‌ಟಿ ಹಾಲು ಉತ್ಪನ್ನಗಳನ್ನು
ಹಾಸನಾಂಬೆಗೆ ಹರಿದು ಬಂದ ಭಕ್ತಸಾಗರ: ದರ್ಶನಕ್ಕೆ ನಾಳೆ ಕೊನೆಯ ದಿನ
ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಸೋಮವಾರದ ಅಂತ್ಯಕ್ಕೆ 23 ಲಕ್ಷ ಭಕ್ತರು ಭೇಟಿ ನೀಡಿದ್ದು, ನಾಳೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿದ್ದು,
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ: ಪೊಲೀಸ್ ಇಲಾಖೆ ಅಭಿನಂದಿಸಿದ ಸಿಎಂ
ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್
ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿಕೆ ಶಿವಕುಮಾರ್
"ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಕಿರುಕುಳ
ಹಾಲುಮತದವರು ಅವರಾಗಿಯೇ ಪದತ್ಯಾಗ ಮಾಡಬೇಕು, ಬಲವಂತ ಸಾಧ್ಯವಿಲ್ಲ ಎಂದ ಕೋಡಿಮಠದ ಶ್ರೀ
ಹೋದ ಸಲ ಐದು ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವವಿದೆ, ಅಧಿಕಾರ ಬಂದರೆ, ವಾಪಸ್ ತೆಗೆದುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ
ನಾರಾಯಣ ನೇತ್ರಾಲಯದಲ್ಲಿ ಮೂರು ಪಟಾಕಿ ಗಾಯ ಕೇಸ್
ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಪಟಾಕಿ ಸಿಡಿದು ಗಾಯಗೊಂಡ 15 ಒಳಗಿನ ವರ್ಷದ ಮೂರು ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಪಟಾಕಿ ಸಿಡಿಸುವಾಗ ನೋಡುತ್ತಿದ್ದ ಮೂರು ವರ್ಷದ ಮಗುವೊಂದಕ್ಕೆ ಗಾಯವಾಗಿದೆ. ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಗಾಯಗೊಂಡು ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 71 ಜನ,
ದರ್ಶನ್‌ಗೆ ಮತ್ತೆ ಬೆನ್ನು ನೋವು: ಹೀಟಿಂಗ್ ಬೆಲ್ಟ್ ಗೆ ಜೈಲು ವೈದ್ಯರ ಮನವಿ
ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ಹೀಟಿಂಗ್ ಬೆಲ್ಟ್ ಒದಗಿಸಲು ಜೈಲಿನ ವೈದ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ. ಕಾರಾಗೃಹ ಆಸ್ಪತ್ರೆಯ ಮುಖ್ಯ ವೈದ್ಯರು, ಸಿ.ವಿ.ರಾಮನ್ ನಗರ ಆಸ್ಪತ್ರೆ ವೈದ್ಯಕೀಯ
ವಿರಳಾತಿವಿರಳ Hyper-IgE Syndrome: ಸರ್ಕಾರದಿಂದ ಚಿಕಿತ್ಸೆಗೆ ಹಣ ಸಿಗದೆ ಸುಳ್ಯದ ಚಾಂದಿನಿ ಸಾವು
ಅಪರೂಪದಲ್ಲಿ ಅಪರೂಪದ ಕಾಯಿಲೆ (ಹೈಪರ್-IgE ಸಿಂಡ್ರೋಮ್)ಯಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಚಾಂದಿನಿಯವರನ್ನು ಕಾಡುತ್ತಿದ್ದ ಕಾಯಿಲೆ ಏನು
ಹೆಲ್ಮೆಟ್ ಧರಿಸದ ಬೈಕ್ ಸವಾರ ಅಪಘಾತಕ್ಕೆ ಬಲಿ: ಪರಿಹಾರ ಮೊತ್ತ ಕಡಿತಗೊಳಿಸಿದ ಹೈಕೋರ್ಟ್
ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿರುವ ಹೈಕೋರ್ಟ್, ಅಪಘಾತ ವೇಳೆ ಬೈಕ್ ಸವಾರ ಹೆಲ್ಮೆಟ್ ಧರಿಸದಿದ್ದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರೂ.. ಕಡಿತಗೊಳಿಸಿ ಆದೇಶಿಸಿದೆ. ಹೆಲ್ಮೆಟ್ ಧರಿಸದೆ ಇರುವುದು ಬೈಕ್ ಸವಾರನ ನಿರ್ಲಕ್ಷ್ಯವೆಂದು ಹೇಳಿದ ಕೋರ್ಟ್, ನಿಗದಿಪಡಿಸಿದ ಒಟ್ಟು
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ: ನಾಳೆಯಿಂದ ಮೂರು ದಿನಗಳ ಕಾರ್ಯಕ್ರಮ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 21,




