Tuesday, September 29, 2026
Menu

ಕುಮಾರಸ್ವಾಮಿ ಅವರಲ್ಲಿ ಏನೋ ಸಮಸ್ಯೆಯಿದೆ ಅಂದಿದ್ದೇಕೆ ಡಿಕೆ ಶಿವಕುಮಾರ್‌

“ಕುಮಾರಸ್ವಾಮಿ ತಮ್ಮ ಅನುಭವದ ಲೆಕ್ಕಾಚಾರದ ಮೇಲೆ ಮಾತನಾಡಿರಬೇಕು. ಅವರಲ್ಲಿ ಏನೋ ಸಮಸ್ಯೆ ಇರಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬೆಂಗಳೂರಿನ ಕೆಎಎಸ್ ಅಧಿಕಾರಿಗಳ ಸಂಘದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಹೀಗೆ  ಪ್ರತಿಕ್ರಿಯೆ ನೀಡಿದರು. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸಚಿವ ಸುಧಾಕರ್ ಆರೋಗ್ಯದ ವಿಚಾರ ಮುಚ್ಚಿಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಯಾವ ಹೆಬ್ಬೆಟ್ಟು, ಏನು ಎಂದು ಗೊತ್ತಿದ್ದರೆ ಅವರೇ ಹೇಳಬೇಕು. ಅವರ ಕುಟುಂಬದವರಿಗೆ ಹೇಳಬೇಕು. ಕುಮಾರಸ್ವಾಮಿ ಅವರು ರಾಜಕೀಯ

ಕುಡಿಯುವ ನೀರಿನ ಸಮಸ್ಯೆ: ಡಿಸಿಗಳೇ ನೇರ ಹೊಣೆಯೆಂದು ಸಿಎಂ ಎಚ್ಚರಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ತಾಪ ತೀವ್ರಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ

ಒಳಮೀಸಲಾತಿ ಹಂಚಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಕೇಪ್‌ ಸೂತ್ರ: ಆರ್‌ ಅಶೋಕ

ಒಳಮೀಸಲಾತಿಯನ್ನು ಹಂಚಿಕೆ ಮಾಡುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಕೇಪ್‌ ಸೂತ್ರ ಅನುಸರಿಸಿದ್ದಾರೆ. ಇದರಿಂದ ಯಾವುದೇ ಸಮುದಾಯಕ್ಕೆ ಪ್ರಯೋಜನ ಸಿಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿಯನ್ನು ಹಂಚಿಕೆ ಮಾಡುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಒಂದು ಕಡೆ

ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಭೂಮಿ ನೀಡುವಂತೆ ರಕ್ಷಣಾ ಇಲಾಖೆಗೆ ಡಿಕೆ ಶಿವಕುಮಾರ್‌ ಮನವಿ

ರಕ್ಷಣಾ ಇಲಾಖೆಯು ಬೆಂಗಳೂರಿನ  ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳ ಸಡಿಲಿಕೆ, ಅವಳಿ ಸುರಂಗ ಮಾರ್ಗ, ರೋಟರಿ ಮೇಲ್ಸೇತುವೆ ಸೇರಿದಂತೆ ವಿವಿಧ ಯೋಜನೆ ಜಾರಿಗೆ ರಕ್ಷಣಾ ಇಲಾಖೆ ಜಾಗಗಳನ್ನು ನೀಡುವಂತೆ ಹಾಗೂ ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು

ಒಳಮೀಸಲಾತಿ: ಎಡಗೈ 5.25%, ಬಲಗೈ 5.25 % ಇತರ ಸಮುದಾಯಗಳಿಗೆ 4.5% ಮೀಸಲಾತಿ: ಸಿಎಂ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25, 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಡೆದ ಸಂಪುಟ

ಐಟಿಯಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆ ಸಿಸಿಐ ನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026” ಉದ್ಘಾಟಿಸಿ ಮಾತನಾಡಿದರು.

ಮಾಂಗಲ್ಯ, ಜನಿವಾರ ತೆಗೆಸುವ ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ ಕಿಡಿ

ಕಳೆದ ವರ್ಷ ಸಿಇಟಿ, ನೀಟ್ ಪರೀಕ್ಷೆಗಳ ಸಂದರ್ಭದಲ್ಲಿ ಜನಿವಾರ ಕತ್ತರಿಸಿ, ಕೆಪಿಎಸ್ಸಿ ಪರೀಕ್ಷೆಯಲ್ಲಿ ಮಾಂಗಲ್ಯ ತೆಗೆಸಿ ಪರೀಕ್ಷೆ ಬರೆಯುವಂತೆ ಹೇಳಿದ್ದ ಕಾಂಗ್ರೆಸ್‌ ಸರ್ಕಾರ ಈ ವರ್ಷವೂ ತನ್ನ ಹಳೆ ಚಾಳಿ ಮುಂದುವರಿಸಿದೆ. ಬೆಂಗಳೂರಿನ ಕೋರಮಂಗಲದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ

ಇಸ್ರೇಲ್-ಲೆಬನಾನ್ ಕದನ ವಿರಾಮ ಮೂರು ವಾರ ವಿಸ್ತರಣೆ

ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮ ಮೂರು ವಾರಗಳವರೆಗೆ ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಏ.23 ರಂದು ನಡೆದ ಎರಡನೇ ಸುತ್ತಿನ ಮಾತುಕತೆ ಬಳಿಕ ಈ

ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ, ಹೈಕಮಾಂಡ್ ಭೇಟಿ ಮಾಹಿತಿ ಬಹಿರಂಗ ಮಾಡಲ್ಲ: ಡಿಕೆ ಶಿವಕುಮಾರ್

“ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ  ದೆಹಲಿ ನಾಯಕರಿಗೆ ಚುನಾವಣೆ ಕುರಿತು ವರದಿ ನೀಡುತ್ತೀರಾ ಎಂಬ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2026: ಭಾರತದ ಮ್ಯಾಪ್‌ ಪಝಲ್‌ ಜೋಡಿಸಿದ ಕೊಪ್ಪಳದ ತೇಜಸ್‌

ಕೊಪ್ಪಳ ಜಿಲ್ಲೆಯ ಬಾಲಕ ತೇಜಸ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಸಾಧಾರಣ ಏಕಾಗ್ರತೆ ಮತ್ತು ವೇಗದ ಮೂಲಕ ಭಾರತದ ನಕಾಶೆಯ ಪಝಲ್‌ಗಳನ್ನು ಜೋಡಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2026’ರಲ್ಲಿ ಸ್ಥಾನ ಪಡೆದಿದ್ದಾನೆ. ತೇಜಸ್‌ ಕೊಪ್ಪಳಕಿದದಾಳದ ಶಾರದಾ ಇಂಟರ್‌ ನ್ಯಾಷನಲ್ ಶಾಲೆಯ 4ನೇ