Tuesday, September 29, 2026
Menu

ನ್ಯಾಯಾಂಗ ಸ್ವಾತಂತ್ರ್ಯವನ್ನು ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸಬೇಕಿದೆ: ಸಿಎಂ 

ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ನ್ಯಾಯಾಂಗ ಸ್ವಾತಂತ್ರ್ಯವನ್ನು ಬಾಹ್ಯ ಒತ್ತಡಗಳಿಂದ ಮಾತ್ರವಲ್ಲದೆ ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಅಲ್ಗಾರಿದಮಿಕ್ ಪಕ್ಷಪಾತವು ಕಾನೂನಿನ ಮುಂದೆ ಸಮಾನತೆಯ ಖಾತರಿಯನ್ನು ಹಾಳುಮಾಡಬಹುದು. ಅಪಾರದರ್ಶಕ ವ್ಯವಸ್ಥೆಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯ  ತಾರ್ಕಿಕ ನಿರ್ಧಾರಗಳ ಸಿದ್ಧಾಂತವನ್ನು ದುರ್ಬಲಗೊಳಿಸುವ ಆತಂಕವನ್ನು ಅಲ್ಲಗಳೆಯುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ

ಬೆಸ್ಕಾಂ, ಚೆಸ್ಕಾಂ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ

ಬೆಸ್ಕಾಂ ಕಂಪನಿಯ ಗ್ರಾಹಕರಿಗೆ ಪ್ರತಿ ಯುನಿಟ್‌ಗೆ ೫೬ ಪೈಸೆ, ಮೈಸೂರಿನ ಚೆಸ್ಕೋ ಕಂಪನಿ ವ್ಯಾಪ್ತಿಯ ಗ್ರಾಹಕರಿಗೆ ವಿದ್ಯುತ್‌ ದರದಲ್ಲಿ ೧೫ ಪೈಸೆ ಏರಿಕೆ ಮಾಡಲಾಗಿದೆ. ಮಂಗಳೂರು ವ್ಯಾಪ್ತಿಯ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ೯ ಪೈಸೆ, ಹುಬ್ಬಳ್ಳಿ ಮತ್ತು ಕಲಬುರ್ಗಿಯ ಗ್ರಾಹಕರಿಗೆ ತಲಾ

ಬೆಂಗಳೂರಿನಲ್ಲಿ ಹೂಡಿಕೆ ಮಾಡಿದವರು ಲಾಭ ಮಾಡಿದ್ದಾರೆ, ನಷ್ಟ ಅನುಭವಿಸಿಲ್ಲ: ಡಿಕೆ ಶಿವಕುಮಾರ್

“ಬೆಂಗಳೂರು ಎಲ್ಲಾ ಕ್ಷೇತ್ರದಲ್ಲಿ ದೇಶದ ಇತರೆ ನಗರಗಳಿಗಿಂತ ಮುಂಚೂಣಿಯಲ್ಲಿದೆ. ನಮ್ಮಲ್ಲಿ ಬಂದು ಹೂಡಿಕೆ ಮಾಡಿದ ಪ್ರತಿಯೊಬ್ಬರೂ ಲಾಭ ಪಡೆದಿದ್ದಾರೆ ಹೊರತು ನಷ್ಟ ಅನುಭವಿಸಿಲ್ಲ. ಈ ಕಾರಣಕ್ಕೆ ಬೆಂಗಳೂರಿಗೆ ಬಂದವರು ಮತ್ತೆ ವಾಪಸ್ ಹೋಗಲು ಬಯಸುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ತಂತ್ರಜ್ಞಾನ ಜೊತೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವ ಪಾಲುದಾರಿಕೆಯತ್ತ ಕರ್ನಾಟಕ ಒಲವು: ಸಿಎಂ ಸಿದ್ದರಾಮಯ್ಯ

ತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.  ನವದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ  ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು

ವಿನಯ್‌ ಕುಲಕರ್ಣಿ ಕೇಸ್‌: ರಾಜಕೀಯದಿಂದಾಗುವ ಕೊಲೆ ಪ್ರಕರಣಗಳಿಗೆ ತಿಲಾಂಜಲಿ ನೀಡಿದ ತೀರ್ಪು ಎಂದ ಆರ್‌ ಅಶೋಕ

ಮಾಜಿ ಸಚಿವ ವಿನಯ್‌ ಕುಲಕರ್ಣಿ ಮಾಡಿಸಿದ ಕೊಲೆ ಪ್ರಕರಣದಲ್ಲಿ, ಇಬ್ಬರು ಸಾಕ್ಷಿ ಹೇಳಿದ್ದಾರೆ. ರಾಜಕಾರಣಿಗಳ ಮಾತು ಕೇಳಿಕೊಂಡು ಕೊಲೆ ಮಾಡಿದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. ಸಿಬಿಐ ತನಿಖೆ ನಡೆಯದೇ ಇದ್ದಿದ್ದರೆ ಪೊಲೀಸ್‌ ಇಲಾಖೆ ಕೇಸನ್ನು ಮುಚ್ಚಿಹಾಕುತ್ತಿತ್ತು. ಈಗ ಎಲ್ಲವೂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಮಾಧ್ಯಮ ಸೃಷ್ಟಿ ಅಷ್ಟೇ, ಎಲ್ಲರೂ ನಮ್ಮ ಶಾಸಕರೇ: ಡಿಕೆ ಶಿವಕುಮಾರ್

“ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳೇ ನಮ್ಮನ್ನು ಇಬ್ಭಾಗ ಮಾಡುತ್ತಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸಿದ್ದರಾಮಯ್ಯ ಅವರೊಟ್ಟಿಗೆ ಒಂದೇ ವಿಮಾನದಲ್ಲಿ ಬಹಳ

ಪೋಕ್ಸೋ ಆರೋಪಿಗೆ ಡಿಫಾಲ್ಟ್ ಜಾಮೀನು ಸಿಗಲ್ಲ: ಕರ್ನಾಟಕ ಹೈಕೋರ್ಟ್​

ಪೋಕ್ಸೋ ಕಾಯ್ದೆಯಡಿ ಪ್ರಕರಣದ ತನಿಖೆ ವಿಳಂಬವಾದರೂ ಆರೋಪಿಗಳಿಗೆ ಶಾಸನಬದ್ಧ ಜಾಮೀನು ಲಭಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಎನ್‌ಎಸ್‌ಎಸ್ 193(2)ಅಡಿ ಈ ರಕ್ಷಣೆಗೆ ಆರೋಪಿಗಳು ಅರ್ಹರಲ್ಲ. ಅಪೂರ್ಣ ಚಾರ್ಜ್‌ಶೀಟ್ ಕೂಡ ಜಾಮೀನು ಪಡೆದುಕೊಳ್ಳಲು ಕಾರಣವಾಗುವುದಿಲ್ಲ. ಪೋಕ್ಸೋ ಕಾನೂನು ಸಂತ್ರಸ್ತರ

ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ

ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ

ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಸಿಎಂ ಸೂಚನೆ

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಿಎಂ  ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ

ರಾಜಕೀಯ ನಾಯಕರೊಂದಿಗಿನ ಸಂಭಾಷಣೆ ರೆಕಾರ್ಡ್‌: ವಚನಾನಂದ ಶ್ರೀ ವಿರುದ್ಧ ಆರೋಪ

ಹರಿಹರ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಶ್ರೀ ಪ್ರಮುಖ ರಾಜಕೀಯ ನಾಯಕರ ಜೊತೆಗಿನ ಸಂಭಾಷಣೆಗಳನ್ನು ರೆಕಾರ್ಡ್‌ ಮಾಡಿ ಇಟ್ಟುಕೊಳ್ಳುತ್ತಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಪಂಚಮಸಾಲಿ ಸಮಾಜ ಟ್ರಸ್ಟ್‌ ಸದಸ್ಯ ಎಚ್.ಎಸ್. ನಾಗರಾಜ್, ವಚನಾನಂದ ಶ್ರೀ ವಿರುದ್ಧ ಈ ಗಂಭೀರ