ರಾಜ್ಯ
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24
ಮಾ.22ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ
ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂ. ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವ
ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು
ಸೆಕ್ಸ್ ನಿರಾಕರಿಸಿದ ಮಹಿಳೆ, ಮಗುವನ್ನು ಕೊಂದಾತನಿಗೆ ಜೀವಾವಧಿ ಶಿಕ್ಷೆ
ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿ.ಕೆ. ಶಿವಕುಮಾರ್
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ
ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ಬಿಎಲ್ ಡಿಸಿ ಫ್ಯಾನ್ ಲೋಕಾರ್ಪಣೆ
ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ
ದಕ್ಷಿಣ ಭಾರತದಲ್ಲಿ ಪ್ರತಿಪಕ್ಷಗಳ ಹತ್ತಿಕ್ಕಲು ಕ್ಷೇತ್ರ ಪುನರ್ ವಿಂಗಡನೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ
ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮ
ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ
ತುಮಕೂರು: ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು
ಮಡಿಕೇರಿಯಲ್ಲೂ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಆಹುತಿ
ಮಡಿಕೇರಿಯ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಹಾಗೂ ನಾಲಾಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು 20 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ