ರಾಜ್ಯ
ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ ಬ್ಯಾಂಕ್, ಸಹಕಾರ ಸಂಘಗಳ ಸಾಲ ಶಿಸ್ತಿನಿಂದ ಮರುಪಾವತಿ: ಡಿಸಿಎಂ ಡಿಕೆ ಶಿವಕುಮಾರ್
ಮಂಗಳೂರು: ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳೂರಿನ ಬಂಗ್ರ ಕೂಳೂರುನಲ್ಲಿ ಶನಿವಾರ ನಡೆದ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ 2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು
ರಾಜ್ಯದ ಪೊಲೀಸರ ರಜೆ ರದ್ದು: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದ ಸೂಚನೆ ಮೇರೆಗೆ ರಾಜ್ಯದ ಪೊಲೀಸರ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದಿಂದ ಸೂಚನೆ
ಕಲ್ಯಾಣಪಥ, ಪ್ರಗತಿಪಥ ರಸ್ತೆ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ
ಬೆಂಗಳೂರು: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್
ಅನಿಲ ಪ್ರಾಧಿಕಾರದ ಜತೆ ರಾಜ್ಯದ ಒಡಂಬಡಿಕೆ: 5 ಸಾವಿರ ಕೋಟಿ ರೂ. ಹೂಡಿಕೆ
ಬೆಂಗಳೂರು: ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ
ಯಶಸ್ವಿಯಾಗಿ ನಡೆದ ಕೆಪಿಟಿಸಿಎಲ್ ಪರೀಕ್ಷೆ: 1800 ಅಭ್ಯರ್ಥಿಗಳು ಭಾಗಿ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ದೈಹಿಕ ಕ್ಷಮತೆ/ ಸಹನ ಶಕ್ತಿ ಪರೀಕ್ಷೆಯನ್ನು ರಾಜ್ಯದ ನಾಲ್ಕು ವಲಯಗಳಲ್ಲಿ ಯಶಸ್ವಿಯಾಗಿ ನಡೆಸಿದೆ. ಕವಿಪ್ರನಿನಿಯಲ್ಲಿ ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ
ಪಾಕಿಸ್ತಾನವನ್ನು ಬಲಿಷ್ಠ ಭಾರತ ಮಟ್ಟಹಾಕಲಿದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಮಟ್ಟಹಾಕಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆ.ಆರ್ ವೃತ್ತದಿಂದ ಮಿನ್ಸ್ಕ್ ಸ್ಕ್ವೇರ್ ವೃತ್ತದವರೆಗೂ ಶುಕ್ರವಾರ ನಡೆದ ಜೈ ಹಿಂದ್ ತಿರಂಗಾ ಯಾತ್ರೆ ವೇಳೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ
ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ!
ಬೆಂಗಳೂರು: ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು
ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತ ವಿರೋಧಿಗಳು: ಡಿಸಿಎಂ
ನೆಲಮಂಗಲದಲ್ಲಿ ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತರು ಅಲ್ಲ , ಅವರು ರೈತರ ವಿರೋಧಿಗಳು. ಕೋಲಾರದಲ್ಲೂ ವಿರೋಧ ಮಾಡಿದವರಿಗೆ ಏನೂ ಮಾಡೋದಕ್ಕೆ ಆಗಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ಹೇಳಿದ್ದಾರೆ. ಸರಳ ಕಾವೇರಿ ಹಾಗೂ ಮನೆ ಬಾಗಿಲಿಗೆ ಸಂಚಾರಿ ಕಾವೇರಿ ಯೋಜನೆಗೆ
ಭಾರತ-ಪಾಕ್: ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮದ ಎಚ್ಚರಿಕೆಯಿತ್ತ ಪೊಲೀಸ್ ಕಮಿಷನರ್ ದಯಾನಂದ್
ಉಗ್ರರ ದಾಳಿಗೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಸಮರ್ಥವಾಗಿಯೇ ಪ್ರತೀಕಾರ ತೀರಿಸಿದೆ. ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಎದುರಾಗಿದ್ದು, ಗಡಿ ಪ್ರದೇಶಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಕರ್ನಾಟದಲ್ಲೂ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ




