Tuesday, September 29, 2026
Menu

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ: ಆಳ್ವಾಸ್‌ನ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ

2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ದಾಖಲೆಯ ಹೆಚ್ಚಳವಾಗಿದೆ. ವಾಣಿಜ್ಯ‌ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ 600ಕ್ಕೆ 598 ಅಂಕ ತೆಗೆದ ಕೊಟ್ಟೂರಿನ ಅರ್ಚನಾ ಮತ್ತು ದಿಶಾ ಪ್ರಥಮ ಸ್ಥಾನದಲ್ಲಿದ್ದಾರೆ. ಕಳೆದ ವರ್ಷಕ್ಕಿಂತ ಶೇ. 12ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಚಾರಣಿಗರಿಗೆ ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ ಸುರಕ್ಷತೆ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ, ಚಾರಣಿಗರ ಮೊಬೈಲ್‌ನಲ್ಲಿ ಕಡ್ಡಾಯವಾಗಿ ಟ್ರ್ಯಾಕಿಂಗ್ ಆ್ಯಪ್ ಅಳವಡಿಕೆ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಿಂದ ರಾತ್ರಿ ಕೋಟ್ಯಾಂತರ ರೂ. ಹಂಚಿಕೆ: ಚರಂತಿಮಠ ಆರೋಪ

ಬಾಗಲಕೋಟೆ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಕಾಂಗ್ರೆಸ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ

ಯೋಗೇಶ್‌ ಗೌಡ ಕೊಲೆ ಕೇಸ್‌: ಏಪ್ರಿಲ್‌ 15ಕ್ಕೆ ತೀರ್ಪು ಪ್ರಕಟ

ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 15ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ

ಕೇಂದ್ರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ರೈತರಿಗೆ ಪ್ರೋತ್ಸಾಹಧನ ಹಂಚಿಕೆ: ಡಿಕೆ ಸುರೇಶ್

“ಕೇಂದ್ರ ಸರ್ಕಾರಕ್ಕೆ ಆದಾಯ ತೆರಿಗೆ ಕಟ್ಟುವ ಬದಲು ಅದನ್ನು ರೈತರಿಗೆ ಹಂಚಲಾಗುತ್ತಿದೆ. ಅಧಿಕಾರಿಗಳು ಆದಾಯ ತೆರಿಗೆ ಕಟ್ಟಬೇಕು ಎಂದರು. ನಾನು ಲಾಭ ತೋರಿಸಿದರೆ ಮಾತ್ರ ಅಲ್ಲವೇ ತೆರಿಗೆ ಕಟ್ಟಬೇಕು. ನಮ್ಮ ರೈತರ ಹಣ ರೈತರಿಗೆ ಮರಳಿ ಹೋಗಬೇಕು ಎಂದು 60 ಕೋಟಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಕೆ ಶಿವಕುಮಾರ್ 

“ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ

ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್

“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ

ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಡಿಕೆ ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್‌ ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ 

ಅಕ್ರಮ ಆಸ್ತಿ ಆರೋಪ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಶಿವಮೊಗ್ಗ, ಬಳ್ಳಾರಿ, ಬೆಳಗಾವಿಯ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆಯ ರೂಂ, ಶಿಕಾರಿಪುರದ ಚನ್ನಕೇಶವ ನಗರದ ಮನೆ, ಶಿಕಾರಿಪುರ ತಾಲೂಕು ತರಲಘಟ್ಟದ ತೋಟದ

ಕೆಎಸ್ಸಾರ್ಟಿಸಿ, ಬಿಎಂಟಿಸಿ ನೌಕರರಿಗೆ ವೇತನ ಹೆಚ್ಚಳ ಪ್ರಸ್ತಾವ

2025ರ ಏ.1ರಿಂದ ಜಾರಿಗೆ ಬರುವಂತೆ ಬಿಎಂಟಿಸಿ ನೌಕರರಿಗೆ ಶೇ.3 ಮತ್ತು ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳದ ಪ್ರಸ್ತಾವವನ್ನು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಾರಿಗೆ ನೌಕರ ಸಂಘಟನೆಗಳ ಮುಂದಿಟ್ಟಿದ್ದಾರೆ. ಈ ಕುರಿತು ಚರ್ಚಿಸಲು ಏ.17ರಂದು ಸಭೆ ನಡೆಯಲಿದೆ. ವೇತನ ಹೆಚ್ಚಳ