Saturday, January 03, 2026
Menu

ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನಕ್ಕಾಗಿ ಸರ್ಕಾರ ಪ್ರಯತ್ನ: ಎಚ್‌.ಕೆ. ಪಾಟೀಲ

ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ, ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಹೇಳಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಪ್ರವಾಸೋದ್ಯಮದ ಹೊಸ ಉಪಕ್ರಮಗಳ ಬಗ್ಗೆ ರಾಜ್ಯ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು. ಜಾಗತಿಕ ಸ್ಪರ್ಧಾತ್ಮಕ ಪ್ರವಾಸೋದ್ಯಮ

ಸಿಂಧನೂರು ಪ್ರಾಧಿಕಾರ ಕಚೇರಿಯಲ್ಲಿ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಸಿಂಧನೂರು : ನಗರ ಯೋಜನಾ ಪ್ರಾಧಿಕಾರದ ಕಚೇರಿ ಒಳಗಡೆ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಜರುಗಿದೆ. ವಾರ್ಡ್ ನಂಬರ್ 13ರ ವ್ಯಕ್ತಿಯಾದ ಶಂಕರಪ್ಪ ಎನ್ನುವವರು ಕೆ.ಕರಿಯಪ್ಪ ಲೇಔಟ್ ಎದುರಿಗೆ ಇರುವ ಸರ್ವೆ ನಂಬರ್ 965/10 ತಮ್ಮ ಖಾಲಿ ಜಾಗವನ್ನು

ಪಾಲಿಕೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಆರಂಭಕ್ಕೆ ಸಚಿವ ಬೈರತಿ ಸುರೇಶ್ ಗಡುವು

ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಮಾಸಾಂತ್ಯದ ವೇಳೆಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಗಡುವು ವಿಧಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ

6.5 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿ ದರ್ಶನ, 5 ಕೋಟಿ ಸಂಗ್ರಹ: ಸಚಿವ ಕೃಷ್ಣ ಭೈರೇಗೌಡ

ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನ ಸುಗಮವಾಗಿ ನಡೆಯುತ್ತಿದ್ದು, ಕಳೆದ 5 ದಿನಗಳಲ್ಲಿ 6,40,700 ಮಂದಿ ದರ್ಶನ ಪಡೆದಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಹಾಸನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆ 5

ಸಿಎಂ ಡಿಸಿಎಂ ನಿವಾಸಗಳಿಗೆ ಬಾಂಬ್‌ ಬೆದರಿಕೆ ಸಂದೇಶ: ತನಿಖೆಗೆ ಎಸ್‌ಐಟಿ ರಚನೆ

ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್‌ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಕಳೆದ ಶನಿವಾರ ಇ-ಮೇಲ್‌ ಮೂಲಕ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆ ಪೊಲೀಸ್‌ ಇಲಾಖೆ ಇಂಥ ಪ್ರಕರಣಗಳನ್ನು ಭೇದಿಸಲು ಎಸ್‌ಐಟಿ

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಸೂಚನೆ

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದ್ದು, ಇದರಿಂದ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಸದ್ಯಕ್ಕೆ ನಿರಾಳರಾಗಿದ್ದಾರೆ. ನಂಜೇಗೌಡ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು

ವಿಜ್ಞಾನ ಓದಿಯೂ ಮೌಢ್ಯ ನಂಬಿದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ,

ಮೈಸೂರಲ್ಲಿ ದಲಿತ ಬಾಲಕಿಯ ರೇಪ್‌ ಮರ್ಡರ್‌: ಸಾಂತ್ವನ ಹೇಳದ ಪರಿಹಾರ ನೀಡದ ಸಿಎಂ ಎಂದು ಆರ್‌. ಅಶೋಕ ಕಿಡಿ

ಗುಲ್ಬರ್ಗದಿಂದ ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿ ಕೊನೆಗೆ ಕೊಲೆ ಮಾಡಿದ್ದ ಹೃದಯವಿದ್ರಾವಕ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಆದರೆ ಘಟನೆ ನಡೆದು 5 ದಿನಗಳಾದರೂ, ಪರಿಶಿಷ್ಟ

ಬಿಜೆಪಿ ನವೆಂಬರ್‌ ಕ್ರಾಂತಿ, ಗಡ್ಕರಿ ಪಿಎಂ: ನಮಗೂ ಕುತೂಹಲವೆಂದ ಸಚಿವ ಲಾಡ್‌

ಕೇಂದ್ರ ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿಯಾಗಲಿದ್ದು, ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗಲಿದ್ದಾರೆಂಬ ಮಾಹಿತಿ ಇದೆ. ನಮಗೂ ಕೇಂದ್ರದ ನವಂಬರ್ ಕಾಂತ್ರಿ ಬಗ್ಗೆ ಕುತೂಹಲವಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಬೀದರ್‌ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ನಿವಾಸ , ಕಚೇರಿಗಳಿಗೆ ಲೋಕಾಯುಕ್ತ ದಾಳಿ

ರಾಜ್ಯದ ನಾನಾ ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿಯಾಗಿದೆ. ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ