Tuesday, September 29, 2026
Menu

ದಾವಣಗೆರೆ ಉಪ ಚುನಾವಣೆ: ಕೈ ಅಭ್ಯರ್ಥಿ ಉಮೇಶ್ ಮೇಟಿ ಪರ ಜನ ಬೆಂಬಲವೆಂದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ

ಕೇಂದ್ರದಿಂದ ಸೌದೆ ಒಲೆ ಯೋಜನೆ: ಡಿಸಿಎಂ ವಾಗ್ದಾಳಿ

“ಕೇಂದ್ರ ಬಿಜೆಪಿ ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ

ಸಂಕಷ್ಟದಲ್ಲಿ ಸರ್ಕಾರ, ಜಿಲ್ಲಾಡಳಿತ ಜನರ ಜೊತೆಗಿರಲಿದೆ: ಸಚಿವ ಲಾಡ್‌

ಧಾರವಾಡದ ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯನ್ನು ಗ್ರಾಮದ ಉದ್ದಗಲಕ್ಕೂ ಸಂಚರಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್  ಪರಿಶೀಲಿಸಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಮಾಚಾಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ

ತೃತೀಯ ಭಾಷೆಯಾಗಿ ಹಿಂದಿ ರದ್ದು: ಕುಟಿಲ ರಾಜಕಾರಣವೆಂದ ಆರ್‌ ಅಶೋಕ

ತೃತೀಯ ಭಾಷೆ ಹಿಂದಿಯನ್ನು ರದ್ದು ಮಾಡುವ ಮೂಲಕ ಕಾಂಗ್ರೆಸ್‌ ಸರ್ಕಾರ ಮಕ್ಕಳ ಬದುಕಿಗೆ ಕಲ್ಲು ಹಾಕಿದೆ. ಕನ್ನಡದ ಮೇಲಿನ ಪ್ರೀತಿಯಿಂದ ಸರ್ಕಾರ ಈ ತೀರ್ಮಾನ ಮಾಡಿಲ್ಲ. ಇದು ಕೇವಲ ಕುಟಿಲ ರಾಜಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ

ಶಾಸಕರಿಗೆ ಐಪಿಎಲ್ 3 ಟಿಕೆಟ್ ಫ್ರೀ, 2 ಖರೀದಿಗೆ ಅವಕಾಶ: ಡಿಕೆ ಶಿವಕುಮಾರ್

ಶಾಸಕರಿಗೆ ಐಪಿಎಲ್ ಪಂದ್ಯಗಳ 3 ಟಿಕೆಟ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಟಿಕೆಟ್ ಉಚಿತವಾಗಿ ನೀಡಲು ಒಪ್ಪಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಹೆಚ್ಚುವರಿ ಟಿಕೆಟ್ ಅನ್ನು ಖರೀದಿಸಲು ಅವಕಾಶ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ

ಬಯಲುಸೀಮೆ ಜಿಲ್ಲೆಗಳಿಗೆ ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರು ಪೂರೈಸಲು ಕ್ರಮಕ್ಕೆ ಸಂಸದ ಕೆ. ಸುಧಾಕರ್‌ ಆಗ್ರಹ

ಚಿಕ್ಕಬಳ್ಳಾಪುರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್‌.ಎನ್‌.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದ ಅವರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ

ನಿಮ್ಮ ಸರ್ಕಾರ ತೆರಿಗೆ ಲೂಟಿ ನಿಲ್ಲಿಸಿ ಕೇಂದ್ರದತ್ತ ಬೆರಳು ತೋರಿಸಲಿ: ಡಿಸಿಎಂಗೆ ಆರ್‌ ಅಶೋಕ ಸವಾಲು

ಡಿಸಿಎಂ @DKShivakumar ಅವರೇ, ಮೊದಲು ನಿಮ್ಮ ಸರ್ಕಾರದ ತೆರಿಗೆ ಲೂಟಿಯನ್ನು ನಿಲ್ಲಿಸಿ, ನಂತರ ಬೇರೆಯವರಿಗೆ ಬುದ್ಧಿ ಹೇಳಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆಗಳು ಅತ್ಯಂತ ಹಾಸ್ಯಾಸ್ಪದ ಮತ್ತು ವಿಪರ್ಯಾಸದಿಂದ ಕೂಡಿವೆ. ಕೇಂದ್ರ

ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಮಧು ಬಂಗಾರಪ್ಪ

ವಿದ್ಯಾರ್ಥಿಗಳಿಗೆ ಹಿಂದಿ ಉತ್ತೀರ್ಣತೆ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಹಿನ್ನೆಲೆ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳನ್ನು

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಕೆ ಶಿವಕುಮಾರ್

“ಅನೇಕ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಈ ದೇಶ ಹಾಗೂ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸಾಕಷ್ಟು ಕೊಡುಗೆ ನೀಡಿವೆ. ಅನೇಕ ನಾಯಕರನ್ನು ಹುಟ್ಟುಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಬಣ್ಣಿಸಿದರು. ಜ್ಯೋತಿ ನಿವಾಸ್ ಶಿಕ್ಷಣ ಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಕಾಲೇಜು ದಿವಸ’ ದಲ್ಲಿ

ಎಲೆಕ್ಷನ್‌ಗಾಗಿ ಅಬಕಾರಿ ಸುಂಕ ಇಳಿಸಿ ತೈಲ ಬೆಲೆ ಜಾಸ್ತಿ: ನಮ್ಮ ಕೊಲೆ ಮಾಡುತ್ತಿರುವ ಕೇಂದ್ರವೆಂದು ಡಿಸಿಎಂ ಕಿಡಿ

ಎಲೆಕ್ಷನ್​ಗಾಗಿ ತೈಲ ಅಬಕಾರಿ ಸುಂಕ ಕಡಿಮೆ ಮಾಡಿ, ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ. ಕಂಪನಿಯವರು ಕೂಡ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೇಂದ್ರ ಸರ್ಕಾರ