ರಾಜ್ಯ
ಮಾನ್ವಿಯಲ್ಲಿ ಹಕ್ಕಿಗಳ ನಿಗೂಢ ಸಾವು: ಹಕ್ಕಿ ಜ್ವರದ ಶಂಕೆ
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಮೃತಪಟ್ಟಿದ್ದು, ತೆಲಂಗಾಣದಲ್ಲಿವ್ಯಾಪಿಸಿರುವ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಬರ್ಡ್ ಫ್ಲೂ ಹರಡುತ್ತಿರುವ ಆತಂಕ ಉಂಟಾಗಿದೆ. ಮಾನ್ವಿಯಲ್ಲಿ ಪ್ರತಿದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ನಾನಾ ಪ್ರಭೇದದ ಪಕ್ಷಿಗಳು ಸಾಯುತ್ತಿವೆ. ಮಕ್ಸೂದ್ ಅಲಿ ಎಂಬವರ ತೋಟದಲ್ಲಿ ಪ್ರತಿದಿನ 8-10 ಪಕ್ಷಿಗಳು ಸಾಯುತ್ತಿವೆ. ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪಕ್ಷಿಗಳು ಮರದ ಮೇಲಿನಿಂದ ಏಕಾಏಕಿ
ಕೆಲಸದ ವೇಳೆ ನಿದ್ದೆ ಮಾಡಿದ್ದಕ್ಕೆ ಅಮಾನತು: ಆದೇಶ ರದ್ದುಗೊಳಿಸಿದ ಹೈಕೋರ್ಟ್
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳದ ಕುಕನೂರು ಡಿಪೋದಲ್ಲಿ ಕೆಎಸ್‌ಟಿ ಕಾನ್ಸ್‌ಟೆಬಲ್ ಚಂದ್ರಶೇಖರ್ ಎಂಬವರನ್ನು ಕೆಲಸದ ವೇಳೆ ನಿದ್ರೆ ಮಾಡುತ್ತಿದ್ದರೆಂಬ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿದ್ದ ನಿಗಮದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಿದ್ರೆ ಮನುಷ್ಯನಿಗೆ ಅತ್ಯಗತ್ಯ. ನಿದ್ರೆ ಮತ್ತು ಕೆಲಸದ ನಡುವೆ ಸಮತೋಲನ
ಕಾಂಗ್ರೆಸ್ ಕಡು ದಲಿತ ವಿರೋಧಿ ಅಂದ್ರು ಆರ್. ಅಶೋಕ್
ಕಾಂಗ್ರೆಸ್ ಕಡು ದಲಿತ ವಿರೋಧಿ ಎಂಬುದನ್ನು ಕರ್ನಾಟಕ ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಜಿಲ್ಲೆಯ ಪರಿಶಿಷ್ಟ ಜಾತಿ ಶಾಸಕರಾದ ಕಾಂಗ್ರೆಸ್‌ನ ಎಸ್.ಎನ್.ನಾರಾಯಣಸ್ವಾಮಿ (ಬಂಗಾರಪೇಟೆ), ರೂಪಕಲಾ ಶಶಿಧರ್ (ಕೆಜಿಎಫ್) ಹಾಗೂ
ಮದ್ದೂರಿನಲ್ಲಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಮಂಡ್ಯದ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ
ಬೂಕರ್ ಅವಾರ್ಡ್ ಅಂತಿಮ ಪಟ್ಟಿಯಲ್ಲಿ ಕನ್ನಡದ ಬಾನು ಮುಷ್ತಾಕ್ ಕೃತಿ
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಅಂತಿಮ 13ರ ಪಟ್ಟಿಯಲ್ಲಿ ಕನ್ನಡನಾಡಿನ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರ ಕೃತಿ ಸ್ಥಾನ ಪಡೆದಿದೆ. ಕನ್ನಡದ ಲೇಖಕಿಯೊಬ್ಬರ ಅನುವಾದಿತ ಕೃತಿಯೊಂದು ಬೂಕರ್ ಪ್ರಶಸ್ತಿಯ ಇತಿಹಾಸದಲ್ಲೇ ಮೊದಲ ಬಾರಿಗೆ 13 ಕೃತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಬಾನು
ಕಲಬುರಗಿ ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಕಲಬುರಗಿ ನಗರದ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ ಲೋ ಬಿಪಿಯಿಂದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತಪಟ್ಟವರು. ಹೆರಿಗೆಗಾಗಿ ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದರು. ನಿರಂತರ ರಕ್ತ
11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಡಿಕೆ ಶಿವಕುಮಾರ್
ಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್
ಎಚ್.ಡಿಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ರಾಜ್ಯಪಾಲರ ಮೊರೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ
ಯಾರಲ್ಲಿ ಕೇಳಿ ಟಿಕೆಟ್ ದರ ಹೆಚ್ಚಿಸಿದ್ದೀರೆಂದು ಕಂಡಕ್ಟರ್‌ಗೆ ಕುಡುಕನಿಂದ ಹಲ್ಲೆ
ಕೊಪ್ಪಳ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಯಾರನ್ನು ಕೇಳಿ ಬಸ್ ಟಿಕೆಟ್ ದರ ಹೆಚ್ಚಿಸಿದ್ದೀರಿ ಎಂದು ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬವರ
ಗ್ಯಾರಂಟಿ ಹಣ ಜಮಾ ದಿನಾಂಕ ಘೋಷಣೆ ಮಾಡಿ: ನಿಖಿಲ್ ಕುಮಾರಸ್ವಾಮಿ
ಕಾಂಗ್ರೆಸ್‌ನ ಗ್ಯಾರಂಟಿ ಹಣ ಫಲಾನುಭವಿಗಳ ಕೈಗೆ ಸಿಗದೆ ನಾಲ್ಕೈದು ತಿಂಗಳಾಯ್ತು , ಹಣನೇ ಬಂದಿಲ್ಲ . ಯಾವುದಾದರು ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮೆ ಆಗುತ್ತೆ, ಕಾರಣ ಬೇಡ, ತಕ್ಷಣ ಹಣ ವರ್ಗಾಯಿಸಿ ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.