Tuesday, November 18, 2025
Menu

ಜಾತಿ ಜನಗಣತಿ ಭಾರತೀಯ ಜುಮ್ಲಾ ಪಾರ್ಟಿಯ ಡೋಂಗಿತನ ಜಗಜ್ಜಾಹೀರು: ಕೃಷ್ಣಬೈರೇಗೌಡ

ಕೋಲಾರ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ವಿರೋಧಿಸುತ್ತಿರುವ ಬಿಜೆಪಿಯ ಡೋಂಗಿತನ ಜಗಜ್ಜಾಹೀರಾಗಿದೆ. ಸಮೀಕ್ಷಾ ವರದಿ ಸಲ್ಲಿಸಿದ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡಿದ್ದೇ ಬಿಜೆಪಿ ಸರ್ಕಾರ. ಆಯೋಗದ ವರದಿಗೆ ಸಹಿ ಹಾಕಿರುವ ಸದಸ್ಯರನ್ನು ನೇಮಿಸಿದ್ದೂ ಬಿಜೆಪಿ ಸರ್ಕಾರ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಮುಖಂಡರ ದ್ವಂದ್ವ ನಿಲುವಿಗೆ, ರಾಜಕೀಯ ಮೇಲಾಟಕ್ಕೆ ಇದಕ್ಕಿಂತ ಉದಾಹರಣೇ ಬೇಕೇ? ಡೋಂಗಿತನವೇ

ನಾಳೆಯಿಂದ ರಾಜ್ಯದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ದುಬಾರಿ ಲೈಫ್ ಟೈಮ್ ಟ್ಯಾಕ್ಸ್

ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ರಾಜ್ಯದಲ್ಲಿ ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯೆಲ್ಲೋ ಬೋರ್ಡ್ ವಾಹನ ಖರೀದಿಸಿದವರಿಗೆ ಬಲು ದುಬಾರಿಯಾಗಿ ಪರಿಣಮಿಸಲಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ

ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್‌ನಿಂದ ಉಚ್ಚಾಟನೆಗೊಳಿಸಿ: ಆರ್‌ ಅಶೋಕ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯನವರನ್ನ ಪಕ್ಷದಿಂದ ಉಚ್ಚಾಟನೆ ಮಾಡೋ ಧಮ್ ಇದೆಯಾ ಡಿಕೆ ಶಿವಕುಮಾರ್ ಅವರೇ? “ಉತ್ತರನ ಪೌರುಷ ಒಲೆಯ ಮುಂದೆ” ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ

ಬಸವಣ್ಣ ಸ್ಮರಣೆ ಪ್ರತಿಯೊಬ್ಬ ಕನ್ನಡಿಗ ಹಾಗೂ ಭಾರತೀಯನ ಕರ್ತವ್ಯ: ಸಿಎಂ

ಬಸವಣ್ಣನಂಥವರನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.  ಬೆಂಗಳೂರಿನಲ್ಲಿ ಬಸವ ಸಮಿತಿ  ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು

ಕಾನೂನು ಬಲ್ಲ ವಕೀಲರ ಜವಾಬ್ದಾರಿ ಇಂದು ಹೆಚ್ಚಾಗಿದೆ: ಸಿದ್ದರಾಮಯ್ಯ

ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಪಾಲಿಕೆ ಆಯುಕ್ತರಿಗೆ ಭೈರತಿ ಸುರೇಶ್ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಪಾಲಿಕೆಗಳ ವ್ಯಾಪ್ತಿಯಲ್ಲಿನ

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್

ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಹಜ್ ಯಾತ್ರಿಕರಲ್ಲಿ ಸಿಎಂ ಮನವಿ

ಬೆಂಗಳೂರು: ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ , ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ. ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು  ಹಜ್ ಯಾತ್ರಿಕರಲ್ಲಿ ಮನವಿ ಮಾಡಿದರು. ಅವರು ಇಂದು ಕರ್ನಾಟ ರಾಜ್ಯ ಹಜ್

ಇಂದಿರಾ ಗಾಂಧಿಯಂತೆ ಪಾಕ್‌ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಚಿವ ಎಂ ಬಿ ಪಾಟೀಲ್‌

ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು, ಪ್ರಧಾನಿ ಮೋದಿ ಜೊತೆಗೆ ನಾವಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ. ವಿಜಯಪುರನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಸಿಎಂ

ಕೀರ್ತನಾ ಚಿಕಿತ್ಸೆಗೆ ಕಾರ್ಪೋರೇಟ್ ಕಂಪನಿಗಳ ನೆರವು ಕೊಡಿಸಲು ಮುಂದಾದ ಸಚಿವ ಜಮೀರ್ ಅಹ್ಮದ್‌

ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯ ಪುತ್ರಿ ಕೀರ್ತನಾ ಅವರಿಗೆ ಸಿಎಸ್‌ಆರ್ ನಿಧಿಯಿಂದ ನೆರವು ಕಲ್ಪಿಸುವ ಸಂಬಂಧ ಕಾರ್ಪೋರೇಟ್‌ ಸಂಸ್ಥೆ ಗಳಿಗೆ ಪತ್ರದ ಮೂಲಕ ಮನವಿ ಮಾಡಲು ಸಚಿವ ಜಮೀರ್ ಅಹಮದ್ ಖಾನ್ ಮುಂದಾಗಿದ್ದಾರೆ. ಕೀರ್ತನಾ ಚಿಕಿತ್ಸೆಗೆ