ರಾಜ್ಯ
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಹಜ್ ಯಾತ್ರಿಕರಲ್ಲಿ ಸಿಎಂ ಮನವಿ
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿರುವ 2025 ನೇ ಸಾಲಿನಹಜ್ ಯಾತ್ರಿಕರ ವಿಮಾನಯಾನವನ್ನು ಉದ್ಘಾಟಿಸಿ ಮಾತನಾಡಿದರು. ಈ ವರ್ಷ 8635 ಯಾತ್ರಿಕರು ಹಜ್ ಯಾತ್ರೆಗೆ ಹೊರಟಿದ್ದು, ಮುಂದಿನ ತಿಂಗಳ 15ರವರೆಗೆ ಸುಮಾರು 27 ವಿಮಾನಗಳಲ್ಲಿ ಪ್ರಯಾಣ
ತಿರುಪತಿ ಬಳಿ ಅಪಘಾತ: ಬೆಂಗಳೂರಿನ ಐವರು ಸಾವು
ತಿರುಪತಿ:ವೇಗವಾಗಿ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಅಪಘಾತ ನಡೆದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ
ಶೀಘ್ರವೇ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಉದ್ಘಾಟನೆ: ಸಚಿವ ಶಿವರಾಜ್ ತಂಗಡಗಿ
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂನಲ್ಲಿ (ವೀರಭೂಮಿ) ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದರು. ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯಕ್ಕೆ
ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲೆಂದೇ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ: ಡಿ.ಕೆ. ಶಿವಕುಮಾರ್
ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ
ಶಾಸಕರ ಅಮಾನತು ಆದೇಶ: ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸ ದಂತೆ ರಾಜ್ಯಪಾಲರು ಸರ್ಕಾರಕ್ಕೆ
ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳು ರಾಜ್ಯದಿಂದ ಗಡಿಪಾರು
ಪಹಲ್ಗಾಮ್ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ದೀರ್ಘಾವಧಿ ವೀಸಾ ಹೊಂದಿ ರುವ 91 ಮಂದಿ ಪಾಕ್ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಲ್ಲಿ 91 ಮಂದಿ ವಾಸವಾಗಿದ್ದಾರೆ ಎಂದು
ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್
ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ
ರಾಜ್ಯದಲ್ಲಿ ಅಕ್ರಮ ಶಾಲೆಗಳಿಗೆ ಸಕ್ರಮ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳನ್ನು ಸಕ್ರಮಗೊಳಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ. 2023-24 ಮತ್ತು ಅದಕ್ಕೂ ಹಿಂದಿನ ವರ್ಷಗಳಲ್ಲಿ ಮಾನ್ಯತೆಯೇ ಇಲ್ಲದೆ ಅಥವಾ ಮಾನ್ಯತೆ ನವೀಕರಣ ಮಾಡಿಕೊಳ್ಳದೆ ನಡೆಯುತ್ತಿರುವ ಖಾಸಗಿ ಶಾಲೆಗಳು ಬಾಕಿ ಇರುವ ಹಿಂದಿನ ಎಲ್ಲ ವರ್ಷಗಳಿಗೆ ಮತ್ತೆ
ಶಾಸಕ ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ಕೋಟ್ಯಂತರ ರೂ. ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ ಪ್ರಕರಣದ ತನಿಖೆಯನ್ನು ಇಡಿ ಚುರುಕುಗೊಳಿಸಿದ್ದು, ತನಿಖೆ ವೇಳೆ ಹಲವು ಸ್ಫೋಟಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್ ಕುಲಕರ್ಣಿ ಹಾಗೂ ಶಿಲ್ಪಾಗೌಡ
ಯುದ್ಧವೇ ಬೇಡ ಎಂದು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ: ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಬೀತು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ದೇವನಹಳ್ಳಿಯಲ್ಲಿ ಭಾನುವಾರ




