ರಾಜ್ಯ
ನಾಳೆ ಕೋಗಿಲು ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಮನೆ ಹಂಚಿಕೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕೋಗಿಲು ಅಕ್ರಮ ನಿವಾಸಿಗಳ ಮನೆ ಧ್ವಂಸ ಪ್ರಕರಣದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಮನೆಗಳನ್ನು ನಾಳೆ ವಿತರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ವಸತಿ ಸಚಿವ ಜಮೀರ್ ಅಹ್ಮದ್, ಹೊಸ ವರ್ಷದ ದಿನವೇ ಕೋಗಿಲು ನಿರಾಶ್ರಿತರಿಗೆ ಮನೆ ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಅರ್ಹರನ್ನು ಗುರುತಿಸಲು ಸಾಕಷ್ಟು ಸಮಯ ತೆಗೆದುಕೊಂಡ ಕಾರಣ ಒಂದು ದಿನ ತಡವಾಗಿ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದರು.
ಕೇರಳ ಸಿಎಂಗೂ- ಕರ್ನಾಟಕಕ್ಕೂ ಏನು ಸಂಬಂಧ?: ಸಚಿವ ಬೈರತಿ ಸುರೇಶ್ ಕಿಡಿ
ಬೆಂಗಳೂರು: ಕೇರಳ ಮುಖ್ಯಮಂತ್ರಿಗೂ ಕರ್ನಾಟಕಕ್ಕೂ ಏನು ಸಂಬಂಧ ಇದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಹೆಬ್ಬಾಳ ಮೇಲ್ಸೇತುವೆಯ ನೂತನ ಲೂಪ್ ಉದ್ಘಾಟನೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋಗಿಲು
ಇನ್ನು ಆರು ತಿಂಗಳು ಕೆಎಸ್ಸಾರ್ಟಿಸಿ ನೌಕರರು ಮುಷ್ಕರ ಮಾಡುವಂತಿಲ್ಲ
2026ರ ಜ.1ರಿಂದ ಮುಂದಿನ 6 ತಿಂಗಳವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ಮಾಡುವಂತಿಲ್ಲ ಎಂದು ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಮುಷ್ಕರ ಮಾಡಬಾರದು ಎಂದು ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ
ಜೈಲಲ್ಲಿದ್ದಾಗ ಡಿಸಿಎಂ ಆತ್ಮಸ್ಥೈರ್ಯ ತುಂಬಿದ್ದರು, ಯಾವುದೇ ಸಹಿ ಹಾಕಿಸಿಕೊಂಡಿಲ್ಲ: ವೀರೇಂದ್ರ ಪಪ್ಪಿ
ನಾನು ಬಿಹಾರ ಚುನಾವಣೆಗೆ ಯಾವುದೇ ಹಣ ನೀಡಿಲ್ಲ. ಜೈಲಲ್ಲಿ ಇದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿದ್ದರು. ನನಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರು ನನ್ನಿಂದ ಯಾವುದೇ ಸಹಿ ಹಾಕಿಸಿಕೊಂಡಿಲ್ಲ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದ್ದಾರೆ. ಅಕ್ರಮ ಹಣ
ಇಷ್ಟೊಂದು ಅಕ್ರಮ ವಾಸಿಗಳು ಕೋಗಿಲು ಸೇರಿದ್ದು ಹೇಗೆಂದು ತನಿಖೆಯಾಗಲಿ: ಸುರೇಶ್ ಕುಮಾರ್ ಆಗ್ರಹ
ಕೋಗಿಲು ಕ್ರಾಸ್‌ನ ಡಂಪ್ ಸೈಟ್‌ನಲ್ಲಿ ಇಷ್ಟೊಂದು ಜನ ಬಂದು ಅಕ್ರಮವಾಗಿ ಶೆಡ್ ನಿರ್ಮಿಸಿಕೊಂಡು ವಾಸಿಸಿದ್ದು ಹೇಗೆ ಎಂಬುದು ಮೊದಲು ತನಿಖೆಯಾಗಬೇಕು ಎಂದು ಶಾಸಕ ಸುರೇಶ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೋಗಿಲು ಲೇಔಟ್ ಅಕ್ರಮ ಮನೆ ಸಕ್ರಮ ಮಾಡಿದ ಸರ್ಕಾರದ ಕ್ರಮವನ್ನು ಕಾಂಗ್ರೆಸ್
ಉದ್ಯಮಿ, ಶಿಕ್ಷಣ ತಜ್ಞ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ನಿಧನ
ಅವಿಭಜಿತ ದಕ್ಷಿಣ ಕನ್ನಡದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ರಾಜ್ಯದಲ್ಲಿ ಕೋವಿಡ್ ಅಕ್ರಮ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ಜಸ್ಟಿಸ್ ಡಿ ಕುನ್ಹಾ ಆಯೋಗ
ರಾಜ್ಯದಲ್ಲಿ ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಿರುವ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಆಯೋಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಜಿಲ್ಲೆ ವ್ಯಾಪ್ತಿಯ
ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್‌ಐಎ ತನಿಖೆಗೆ ವಹಿಸಿ: ಆರ್ ಅಶೋಕ ಆಗ್ರಹ
ಕೋಗಿಲು ಕ್ರಾಸ್‌ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ
6,322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಖಡಕ್ ಸೂಚನೆ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು
ಚಾಮರಾಜನಗರದಲ್ಲಿ ರಾತ್ರಿ ಕಾರ್ಯಾಚರಣೆಯಲ್ಲಿ ಗಂಡು ಹುಲಿ ಸೆರೆ
ಚಾಮರಾಜನಗರದಲ್ಲಿ ಹೆಚ್ಚಾಗಿರುವ ಹುಲಿಗಳ ಹಾವಳಿ ನಿಯಂತ್ರಣಕ್ಕೆ ನಡೆಯುತ್ತಿರುವ ಆಪರೇಷನ್ 5 ಟೈಗರ್ಸ್ ಕಾರ್ಯಾಚರಣೆಯಲ್ಲಿ ಮಂಗಳವಾರ ರಾತ್ರಿ ಒಂದು ಗಂಡು ಹುಲಿ ಸೆರೆ ಸಿಕ್ಕಿದೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಾಯಿ ಹುಲಿಯೊಂದಿಗೆ ನಾಲ್ಕು ಮರಿ ಹುಲಿಗಳು ಬೀಡುಬಿಟ್ಟಿರುವ ಚಾಮರಾಜನಗರ ತಾಲೂಕಿನ




