ರಾಜ್ಯ
ಅರಣ್ಯ ಉಳಿದರೆ ಭೂಮಿ ಉಳಿಯುತ್ತದೆ, ಪ್ರಾಣಿ ಹಂತಕರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು
ಸಿಜೆಐ ಮೇಲೆ ಷೂ ಎಸೆತ: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು ಎಂದ ಡಿಸಿಎಂ
ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿಕೆಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ನಾಳೆಯಿಂದ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಳ್ಳುತ್ತಿದೆ. ಅದ್ಧೂರಿಯಾಗಿ ಜಾತ್ರೆ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ. ಅ.9 ರಂದು ಮಧ್ಯಾಹ್ನ 12 ಗಂಟೆ ನಂತರ ಅರಸು ವಂಶಸ್ಥರು ಬನ್ನಿ ಕಡಿದ
ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್
ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ
ಬೆಂಗಳೂರಿನ ಸಮೀಕ್ಷೆಯಲ್ಲಿ ಅಸಂಬದ್ಧ ಪ್ರಶ್ನೆಗಳಿಗೆ ಕತ್ತರಿ!
ಬೆಂಗಳೂರು:ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ವೇಳೆ ಕೇಳಲಾಗುತ್ತಿದ್ದ ಕೆಲವು ಅಸಂಬದ್ಧ ಪ್ರಶ್ನೆಗಳಿಗೆ ವಿನಾಯಿತಿ ನೀಡಿ ಸರ್ಕಾರ ಮೌಖಿಕ ಅದೇಶ ಹೊರಡಿಸಿದೆ. ಸಮೀಕ್ಷೆಯಲ್ಲಿ ಕೇಳಲಾಗುತ್ತಿದ್ದ ಮನೆಯಲ್ಲಿ ಎಷ್ಟು ಕುರಿ ಮತ್ತು ಕೋಳಿಗಳಿವೆ, ಎಷ್ಟು ಚಿನ್ನ ಇದೆ, ಮನೆ ಸ್ವಂತದ್ದಾ, ನಿಮಗೆ ಜಮೀನು ಎಷ್ಟಿದೆ ಎಂಬ
ಅಕ್ಟೋಬರ್ 18 ರವರೆಗೆ ಮನೆ ಮನೆ ಸಮೀಕ್ಷೆ: ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ
ಮನೆ ಮನೆ ಸಮೀಕ್ಷೆ ಅಕ್ಟೋಬರ್ 18 ರ ವರೆಗೆ ನಡೆಯಲಿದ್ದು, ಅಲ್ಲಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ. PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ, ವಿಶೇಷ ಬೋಧನಾ ತರಗತಿಗಳ ಮೂಲಕ ಶಿಕ್ಷಕರು ಪಠ್ಯ ಪೂರ್ಣಗೊಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕುರುಬರನ್ನೂ ST ಗೆ ಸೇರಿಸಿದರೆ ST ಮೀಸಲು ಪ್ರಮಾಣ ಹೆಚ್ಚಾಗಬೇಕು: ಮುಖ್ಯಮಂತ್ರಿ
ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ
ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ
ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ,
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕ
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕ ನಡೆಯಲಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ನಿಲುವೇನಿಲ್ಲ: ಸಿಎಂ ಸ್ಪಷ್ಟನೆ
ಕೊಪ್ಪಳ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ನಿಲುವು ಏನೂ ಇಲ್ಲ. ಈ ವಿಚಾರದಲ್ಲಿ ಮುನ್ನೆಲೆಯೂ ಇಲ್ಲ, ಹಿನ್ನೆಲೆಯೂ ಇಲ್ಲ. ಕೆಲ ವಿರಕ್ತಮಠದ ಸ್ವಾಮೀಜಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ಗಿಣಗೇರಾ ಏರ್‌ಸ್ಟ್ರಿಪ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ




