ರಾಜ್ಯ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು ಅಗದ ರೀತಿಯಲ್ಲಿ ಕೇಂದ್ರ ಸರ್ಕಾರ ಕ್ರಮ ವಹಿಸಬೇಕು ಯಾವ ಕೆಲಸವನ್ನು ಯಾವ ಉದ್ದೇಶಕ್ಕೆ ಮಾಡಿದ್ದಾರೆ ಅವರ ಹಿಂದೆ ಯಾರು ಇದ್ದಾರೆ ಎಂದು ಕೇಂದ್ರ ಸರ್ಕಾರ ತನಿಖೆ ಮಾಡಬೇಕು
ರನ್ಯಾ ರಾವ್, ತರುಣ್ ರಾಜು ಜಾಮೀನು ಅರ್ಜಿಗಳ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾರಾವ್ ಹಾಗೂ ಉದ್ಯಮಿ ತರುಣ್ ರಾಜು ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಜಾಮೀನು ಅರ್ಜಿಗಳ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್
ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲ ಎಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
ಮಂಡ್ಯ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ
ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನ ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ: ಡಿಕೆ ಸುರೇಶ್
ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ
ಮಾಡಬಾರದ್ದನೆಲ್ಲಾ ಮಾಡಿ ದೇವರ ಪೂಜೆ ಮಾಡಿದರೆ ಪಾಪಕರ್ಮ ಹೋಗುತ್ತಾ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ
ಹೈಕೋರ್ಟ್ ಜಡ್ಜ್‌ಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ
ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಹೈಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ವಕೀಲರು, ನ್ಯಾಯಮೂರ್ತಿಗಳನ್ನು
ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಹಲ್ಲೆ: ಸೂಕ್ತ ಕಾನೂನು ಕ್ರಮಕ್ಕೆ ಸಿಎಂ ಆದೇಶ
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ
ವಿಧಾನಸೌಧ ಪ್ರವೇಶಕ್ಕೆ 150 ರೂ. ದುಬಾರಿಯೆಂದು ಸ್ಪೀಕರ್ ಖಾದರ್ ಆಕ್ಷೇಪ
ವಿಧಾನಸೌಧ ಪ್ರವೇಶಕ್ಕೆ ಸಾರ್ವಜನಿಕರಿಗೆ ಶುಲ್ಕ ನಿಗದಿ ಮಾಡಲು ಸರ್ಕಾರ ನಿರ್ಧರಿಸಿದ್ದಂತೆ ಪ್ರವಾಸೋದ್ಯಮ ಇಲಾಖೆ ವಿಧಾನಸೌಧಕ್ಕೆ ಗೈಡೆಡ್ ಟೂರ್ಗೆ ಪ್ರತಿ ವ್ಯಕ್ತಿಗೆ ತಲಾ 150 ರೂ. ನಿಗದಿ ಪಡಿಸುವ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದೆ. ಇಷ್ಟು ದುಬಾರಿ ಪ್ರವೇಶ ಶುಲ್ಕಕ್ಕೆ ಸ್ಪೀಕರ್ ಯು.ಟಿ.
ರಸ್ತೆ ಅಪಘಾತದಲ್ಲಿ ಮೃತರ ವಯಸ್ಕ ಮಕ್ಕಳಿಗೆ ಪರಿಹಾರ ನಿರಾಕರಣೆ ಸಲ್ಲದು: ಹೈಕೋರ್ಟ್
ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಆದೇಶ ಪ್ರಕಟಿಸಿದೆ. ವಯಸ್ಕರೆಂಬ ಕಾರಣ ನೀಡಿ ಮೃತರ ಮಕ್ಕಳಿಗೆ ಪರಿಹಾರ ನೀಡುವುದಕ್ಕೆ ನಿರಾಕರಿಸಿದ್ದ ನ್ಯಾಯಾಧಿಕರಣದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ




