Menu

ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ: ಆರ್‌. ಅಶೋಕ

ರಾಜ್ಯದ ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವೆಬರ್, ಡಿಸೆಂಬರ್ ತಿಂಗಳಲ್ಲಿ ಕ್ರಾಂತಿ ಅಂದಿದ್ದ ಒಬ್ಬರು ಸಚಿವರು ಮನೆಗೆ ಹೋಗಿದ್ದಾರೆ‌. ಒಪ್ಪಂದ ಆಗಿರುವುದು ನಿಜ. ಈಗ ಜಗಳ ಆರಂಭವಾಗಿದೆ‌ ನವೆಂಬರ್-ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುತ್ತಿಲ್ಲ, ಡಿಕೆ ಶಿವಕುಮಾರ್‌ ಹಠ ಬಿಡುತ್ತಿಲ್ಲ. ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದರೆ

ದಸರಾದಲ್ಲಿ ಜೀಪ್‌ ಪರೇಡ್‌: ಸಿಎಂ, ಡಿಸಿಎಂ ಜತೆಗಿದ್ದ ಬಾಲಕ ಯಾರು?

ನಾಡಹಬ್ಬ ದಸರಾ ಸರ್ಕಾರಿ ಕಾರ್ಯಕ್ರಮ, ಈ ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಕುಟುಂಬದವರು ಭಾಗಿಯಾಗಿರುವ ಕಾರಣಕ್ಕೆ ಕಾಂಗ್ರೆಸ್‌ ಹೈ ಕಮಾಂಡ್‌ಗೆ ದೂರು ಸಲ್ಲಿಕೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮೈಸೂರಿನಲ್ಲಿ ಸಿಎಂ ಹಾಗೂ ಡಿಸಿಎಂ ತೆರೆದ ಜೀಪ್‌ನಲ್ಲಿ ಗುರುವಾರ

ದೇಶಕ್ಕೆ ಮಾತ್ರವಲ್ಲ ಬಿಜೆಪಿಗೂ ಗಾಂಧೀಜಿ, ಕಾಂಗ್ರೆಸ್ಸೇ ಆಸರೆ: ಡಿಕೆ ಶಿವಕುಮಾರ್‌

ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ

ಸೋಯಾಬಿನ್‌, ಶೇಂಗಾ ಖರೀದಿ ತ್ವರಿತ ನೋಂದಣಿ ಖರೀದಿಗೆ ಸೂಚನೆ

ಬೆಂಗಳೂರು: ಸೋಯಾಬಿನ್‌, ಶೇಂಗಾ ಖರೀದಿ ಮಾಡಲು ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಸೂಚಿಸಿದ್ದಾರೆ. ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328

ಅದ್ಧೂರಿಯಾಗಿ ನೆರವೇರಿದ ಮೈಸೂರು ದಸರಾ ಜಂಬೂಸವಾರಿ!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದ್ದು, ಸಾವಿರಾರು ಜನರು ದಸರಾ ಕಣ್ತುಂಬಿಕೊಂಡರು. ಗುರುವಾರ ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.  ಈ ಮೂಲಕ ಜಂಬೂಸವಾರಿಗೆ ಅಧಿಕೃತ

ಗಾಂಧೀಜಿ, ಶಾಸ್ತ್ರಿ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ

ಅಧಿಕಾರ ಹಂಚಿಕೆ ಕುರಿತು ಮಾತನಾಡಬೇಡಿ: ಕೈ ನಾಯಕರಿಗೆ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಕಾಂಗ್ರೆಸ್​ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಿಗೂ ಪವರ್ ಶೇರಿಂಗ್ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ

ರಾಜ್ಯದಲ್ಲಿ ಅ.15ರವರೆಗೂ ಸುರಿಯಲಿದೆ ಮಳೆ

ಕರ್ನಾಟಕದಲ್ಲಿ ವಾಡಿಕೆಯಂತೆ ಸೆಪ್ಟೆಂಬರ್ 30ರೊಳಗೆ ಅಂತ್ಯಗೊಳ್ಳಬೇಕಿದ್ದ ನೈರುತ್ಯ ಮುಂಗಾರು ಈ ವರ್ಷ ಅಕ್ಟೋಬರ್ 15ರವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ವರ್ಷ ಮುಂಗಾರು ಮಾರುತ ರಾಜ್ಯದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ

ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿ ಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು

ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆ ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. ತಮ್ಮ ”