Wednesday, November 19, 2025
Menu

ಶಿಕ್ಷಣದಿಂದ ಸ್ವಾಭಿಮಾನದ ಬದುಕು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗಮಾತ್ರ ಗುಲಾಮಗಿರಿಯನ್ನು ನೀಗಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಚಿಕ್ಕೋಡಿಯಲ್ಲಿ ಕರ್ನಾಟಕ ರಾಜ್ಯ ಗೊಲ್ಲ(ಯಾದವ) ರ ಸಂಘದ ಶತಮಾನೋತ್ಸವ ಹಾಗೂ ಶ್ರೀ ಯಾದವಾನಂದ ಸ್ವಾಮಿಗಳ 16 ನೇ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು

ಜನಿವಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ: ಡಿಕೆ. ಶಿವಕುಮಾರ್

ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ

ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,

ಜಾತಿಗಣತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ, ಆತುರದ ನಿರ್ಧಾರವಿಲ್ಲ: ಡಿಸಿಎಂ

ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ಗೆ ಕೆಲವು

ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಆಗಿರುವ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರ ಬಳಕೆ, ದಲಿತರ ಜಾತಿನಿಂದನೆ ಒಳಗೊಂಡಂತೆ ಶಾಸಕ

ಸರ್ಕಾರದಿಂದ ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂ ಎಂದ ಸಿಎಂ

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ,

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ: ಡಿಕೆ ಶಿವಕುಮಾರ್

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು

ಕಾಂಗ್ರೆಸ್‌ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ: ಆರ್‌.ಅಶೋಕ್‌

ಯಾದಗಿರಿ ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಗೆ ಸಿಐಡಿ ಬಿ ರಿಪೋರ್ಟ್ ನೀಡಿ ಬಚಾವ್ ಮಾಡಿದ್ದು, ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ ಎನ್ನುವುದನ್ನು ಪದೇ

ಶೂದ್ರರು ವಿದ್ಯಾವಂತರಾಗಿ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್