ರಾಜ್ಯ
ಕಲ್ಯಾಣ ಕರ್ನಾಟಕ ಜನರಿಗೆ ಬೇಕಿರುವುದು ವೈಮಾನಿಕ ಸಮೀಕ್ಷೆಯ ಫೋಟೋ ಶೂಟ್ ಅಲ್ಲ, ತುರ್ತು ಪರಿಹಾರ: ಆರ್ ಅಶೋಕ
ಸಿಎಂ ಸಿದ್ದರಾಮಯ್ಯ ಅವರೇ ಗಾಢ ನಿದ್ದೆಯಲ್ಲಿದ್ದ ನಿಮ್ಮ ಸರ್ಕಾರಕ್ಕೆ, ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಲಾದರೂ ನೆನಪಾಯಿತಲ್ಲ ಅದೇ ದೊಡ್ಡ ಪುಣ್ಯ. ಆದರೆ ಪ್ರವಾಹದಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಜನರಿಗೆ ಬೇಕಿರುವುದು ನಿಮ್ಮ ವೈಮಾನಿಕ ಸಮೀಕ್ಷೆಯ “ಫೋಟೋ ಶೂಟ್” ಅಲ್ಲ, ತುರ್ತು ಪರಿಹಾರ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ
80 ಪರ್ಸೆಂಟ್ ಕಮಿಶನ್ ಸರ್ಕಾರದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ
ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್ ಕಮಿಶನ್ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ 40% ಕಮಿಶನ್
ಸಿಸಿ ಮತ್ತು ಒಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆ: ಸಿಎಂ ಸಭೆಯಲ್ಲಿ ಚರ್ಚೆ
2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಒಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಅಗತ್ಯ ಕ್ರಮಗಳ ಬಗ್ಗೆ
ಸಾಮಾಜಿಕ, ಆರ್ಥಿಕ,ಶೈಕ್ಷಣಿಕ ಸಮಾನತೆ ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದೇ ಗಣತಿಯ ಉದ್ದೇಶ : ಸಿಎಂ
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ”,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ
ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯು, ಬೆಂಗಳೂರಿನಲ್ಲಿ 2478 ಪ್ರಕರಣ
ರಾಜ್ಯದಲ್ಲಿ ಒಂದೆಡೆ ಮಳೆಯ ಅವಾಂತರವಾದರೆ ಮತ್ತೊಂದೆಡೆ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದು, ಐದಕ್ಕಿಂತ ಹೆಚ್ಚು ಸಾವುಗಳಾಗಿವೆ. ಸತತ ಮಳೆಯಿಂದಾಗಿ ಡೆಂಗ್ಯು ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 5093 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2478 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು
ರಂಗಕರ್ಮಿ ಯಶವಂತ ಸರದೇಶಪಾಂಡೆ ಇನ್ನಿಲ್ಲ
ನಗೆ ನಾಟಕಗಳ ಬಾದ್‌ಶಾ ಎಂದು ಹೆಸರಾಗಿರುವ ರಂಗಕರ್ಮಿ ನಟ, ನಿರ್ದೇಶಕ, ನಾಟಕಕಾರ ಯಶವಂತ ಸರದೇಶಪಾಂಡೆ (೬೦) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಇತ್ತೀಚೆಗಷ್ಟೇ ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾಮಿಂಗ್ ಆರ್ಟ್ಸ್‌ನಲ್ಲಿ ‘ಉತ್ತರೋತ್ತಮ ಉತ್ಸವ – 2025’ ನಡೆಯಿತು. ಯಶವಂತ್ ಸರ್‌ದೇಶಪಾಂಡೆ ಅವರ 60ನೇ ಹುಟ್ಟುಹಬ್ಬದ
ಆಯುಧಪೂಜೆ ದಿನ ವಾಹನ ತೊಳೆಯಲು ಕಾವೇರಿ ನೀರು ಬಳಸುವಂತಿಲ್ಲ
ಆಯುಧ ಪೂಜೆ ದಿನ ಕುಡಿಯಲು ಪೂರೈಕೆಯಾಗುವ ಕಾವೇರಿ ನೀರಲ್ಲಿ ಕಾರು, ಬೈಕ್ ಸೇರಿದಂತೆ ವಾಹನಗಳನ್ನು ತೊಳೆಯುವಂತಿಲ್ಲ. ದಸರಾ ಹಬ್ಬದ ಸಂಭ್ರಮಕ್ಕೆ ಕಾವೇರಿ ನೀರು ಪೋಲು ಮಾಡಿದರೆ ದಂಡ ಪಾವತಿಸಬೇಕಾಗಬಹುದು. ಕಾವೇರಿ ನೀರು ಕುಡಿಯುವುದಕ್ಕೆ ಬಳಕೆಗೆ ಸರಬರಾಜಾಗುವುದು. ಅನಗತ್ಯವಾಗಿ ನೀರು ಪೋಲು ಮಾಡುವುದು,
ಜನಗಣತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿ ನೀಡಬೇಡಿ: ಆರ್.ಅಶೋಕ
ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ
ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ
ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ




