Menu

“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಭೈರತಿ ಸುರೇಶ್ ಅವರ ‘ನೀವು ಕರಾವಳಿಯವರು ಬೆಂಕಿ ಹಚ್ಚುವವರು’ ಎಂಬ ಹೇಳಿಕೆ ಹೊಸ ವಿವಾದ ಸೃಷ್ಟಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ

ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,

ನನ್ನ ಹಕ್ಕು ಬಿಟ್ಟು ಸದನದಲ್ಲಿ ಚರ್ಚೆಗೆ ಸಿದ್ಧ: ವಿಪಕ್ಷಗಳಿಗೆ ಕೃಷ್ಣ ಬೈರೇಗೌಡ ಸವಾಲು

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ನಡೆಯುತತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. 2026ರ

ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್‌ ಲಾಡ್‌

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್‌ ಲಾಡ್‌  ಭರವಸೆ ನೀಡಿದರು.  ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ

ರಾಜ್ಯದಲ್ಲಿ  ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್‌, ಡ್ರಗ್ಸ್‌: ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್‌ ಬಂದಿದೆ. ಡ್ರಗ್ಸ್‌ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ   ವಿಧಾನಸಭೆಯಲ್ಲಿ  ಕಾನೂನು ಸುವ್ಯವಸ್ಥೆ ಕುರಿತು

ನೀರಾವರಿ ಸಮಸ್ಯೆ: ಸಂಸತ್ತಿನಲ್ಲಿ ಯಾಕಿಲ್ಲ ಚರ್ಚೆ?

ಕೃಷ್ಣಾ, ಕಾವೇರಿ ಕಣಿವೆಯಲ್ಲಿ ಇಂದು ಹಲವು ಹತ್ತು ಸಮಸ್ಯೆಗಳು ತಾಂಡವವಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಕೇವಲ ರಾಜ್ಯ ಸರ್ಕಾರದಿಂದ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ದೇಶದ ಫೆಡರಲ್ ಸಿಸ್ಟಂ ಆಫ್ ಡೆಮಾಕ್ರಸಿ ಅಕ್ಷರಶಃ ಕಾರ್ಯ ನಿರ್ವಹಿಸಬೇಕಿದೆ. ರಾಜ್ಯದ ನೀರಾವರಿ ಯೋಜನೆಗಳ ಕಷ್ಟ,

ಬೆಳೆ ಸಮೀಕ್ಷೆ ವ್ಯತ್ಯಾಸ, ಆಕ್ಷೇಪ ಸಲ್ಲಿಸಲು ರೈತರಿಗೆ ಅವಕಾಶ: ಕೃಷಿ ಸಚಿವ ಚಲುವರಾಯಸ್ವಾಮಿ

ಬೆಳಗಾವಿ, ಸುವರ್ಣ ವಿಧಾನಸೌಧ: ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆ್ಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ