Menu

ಬಿಜೆಪಿ ವಿರೋಧದ ನಡುವೆಯೇ ದ್ವೇಷ ಭಾಷಣ ಅಪರಾಧಗಳ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಪ್ರತಿಪಕ್ಷ ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಬೆಳಗಾವಿ  ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ  ಅಂಗೀಕಾರಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಡನೆಯಾಗಿದ್ದ ವಿಧೇಯಕ ಕುರಿತು ವಿವರಣೆ ನೀಡಿದರು. ಆ ಬಳಿಕ ವಿಪಕ್ಷ‌ ನಾಯಕ ಆರ್ ಅಶೋಕ ಅದಕ್ಕೆ ವಿರೋಧ ವ್ಯಕ್ತಪಡಿಸಿ ಡಾ. ಹೆಚ್. ಸಿ. ಮಹಾದೇವಪ್ಪ ಮಂಡಿಸಿದ್ದು ಜನಪರ ವಿಧೇಯಕ, ಪರಮೇಶ್ವರ ಅವರು

ಬೆಂಗಳೂರು-ಮೈಸೂರು ಕಾರಿಡಾರ್ ಯೋಜನೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಜಲಸಂಪನ್ಮೂಲ

ಸರಕಾರಿ ಕನ್ನಡ ಶಾಲೆ ಮುಚ್ಚಲ್ಲ, 11 ಸಾವಿರ ಶಿಕ್ಷಕರ ನೇಮಕ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದಲ್ಲಿ ಯಾವುದೇ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರಿ

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ: ಸಚಿವ ಬೈರತಿ ಸುರೇಶ್

ಸುವರ್ಣಸೌಧ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

6279.80 ಕೋಟಿ ರೂ. ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ವಿತ್ತೀಯ ಕಾರ್ಯಕಲಾಪ ವೇಳೆ ಪೂರಕ ಅಂದಾಜು

“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ

ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,

ನನ್ನ ಹಕ್ಕು ಬಿಟ್ಟು ಸದನದಲ್ಲಿ ಚರ್ಚೆಗೆ ಸಿದ್ಧ: ವಿಪಕ್ಷಗಳಿಗೆ ಕೃಷ್ಣ ಬೈರೇಗೌಡ ಸವಾಲು

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ