ರಾಜ್ಯ
ಫೆ.13 ಹಾವೇರಿಯಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ವಿಕಾಸಸೌಧದಲ್ಲಿ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಮಹತ್ವದ ಸೂಚನೆ ನೀಡಿದ ಅವರು, “ರಾಜ್ಯದ ಉದ್ದಗಲಕ್ಕೂ ಹಾಡಿ, ಹಟ್ಟಿ, ತಾಂಡಗಳು ಕಂದಾಯ ಗ್ರಾಮಗಳಲ್ಲದ ಕಾರಣ ಅಲ್ಲಿನ ನಿವಾಸಿಗಳು
ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ
38 ಸಾವಿರ ಕೋಟಿ ರೂ. ಬಾಕಿ, ಮಾ.5ಕ್ಕೆ ಪ್ರತಿಭಟನೆ, ಸಭೆ ಕರೆಯದಿದ್ದರೆ ದಾಖಲೆ ಬಿಡುಗಡೆ: ಗುತ್ತಿಗೆದಾರರ ಸಂಘ ಸಿಎಂಗೆ ಎಚ್ಚರಿಕೆ
ಗುತ್ತಿಗೆದಾರರಿಗೆ ರಾಜ್ಯ ಸರ್ಕಾರವು 38 ಸಾವಿರ ಕೋಟಿ ರೂ. ಬಾಕಿ ಇದೆ. ಸರ್ಕಾರ ಸಮಸ್ಯೆ ಬಗೆಹರಿಸಿಲ್ಲವಾದ್ದರಿಂದ ಮಾ.5 ರಂದು ಬೃಹತ್ ಪ್ರತಿಭಟನೆ ಮಾಡುತ್ತಿರುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38
ವಿಬಿಜಿ ರಾಮ್‌ಜಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ, ಜನರ ತೆರಿಗೆ ಹಣ ದುರ್ಬಳಕೆ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ವಿಬಿ ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್, ಶರಾವತಿ ಸಂತ್ರಸ್ತರಿಗೆ ಪರಿಹಾರ: ತೀರ್ಮಾನ ಅಂತಿಮ ಘಟ್ಟದಲ್ಲಿ ಎಂದ ಸಚಿವ ಖಂಡ್ರೆ
ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು
ಬೀದಿ ನಾಯಿ ದಾಳಿ; ಇಬ್ಬರು ವಿದ್ಯಾರ್ಥಿಗಳು ಸೇರಿ 7 ಜನರಿಗೆ ಗಾಯ
ಬಳ್ಳಾರಿ: ಬೀದಿ ನಠಯಿ ದಾಳಿ ನಡೆಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಐದು ಜನರು ಗಾಯಗೊಂಡಿರುವ ಬಳ್ಳಾರಿ ಸಮೀಪದ ಹಲಕುಂದಿ ಗ್ರಾಮದಲ್ಲಿ ಬುಧವಾರ ನಡೆದಿದೆ. ವರಲಕ್ಷ್ಮೀ (8), ಸಿಬ್ಬು (5), ಬುಡೇನ್ ಸಾಬ್ (50), ನವದೀಪ್ (10), ತರುಣ್ (18), ತೇಜು(6)
25 ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ
ಶಾಸಕರಿಗೆ ಮಾತ್ರ ಅನ್ವಯವಾಗುವಂತೆ 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಎರಡು ವರ್ಷಗಳ ಅವಧಿಗೆ 2024ರ ಜ.26ರಂದು ನಿಗಮ ಮಂಡಳಿ ಅಧ್ಯಕ್ಷರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಜನವರಿ 26ಕ್ಕೆ ಇವರ ಅಧಿಕಾರಾವಧಿ ಮುಕ್ತಾಯಗೊಂಡ
ಮುಡಾ ಹಗರಣ: ಸಿದ್ದರಾಮಯ್ಯ, ಪತ್ನಿ ಪಾರ್ವತಿ ನಿರಾಳ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರ ವಿರುದ್ಧದ ಮುಡಾ ಸೈಟು ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ
ನಾಳೆ ಸಾರಿಗೆ ನೌಕರರ ಪ್ರತಿಭಟನೆ: ಬೇಡಿಕೆ ಈಡೇರದಿದ್ದರೆ ರಾಜೀನಾಮೆ ಎಚ್ಚರಿಕೆ
ಕೆಎಸ್‌ಆರ್‌ಟಿಸಿ ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಜ.29)ರಂದು ಪ್ರತಿಭಟನೆ ನಡೆಸಲಿದ್ದು, ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ
ಪ್ರಿವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ಅಕ್ರಮಕ್ಕೆ ಅವಕಾಶವಿಲ್ಲ: ಸಂತೋಷ್ ಲಾಡ್
ನೋಂದಾಯಿತ ಕಟ್ಟಡ ಕಾರ್ಮಿಕರ ಆರೋಗ್ಯ ಕಾಪಾಡಲು ನಡೆಸುವ ಪ್ರಿವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ಪರೀಕ್ಷೆಗಳನ್ನು ನಿಯಮಾನುಸಾರ ನಡೆಸಲಾಗುತ್ತದೆ. ಅಕ್ರಮ ನಡೆದಿರುವ ದೂರುಗಳಿದ್ದರೆ ತನಿಖೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು. ವಿಧಾನಸಭೆಯ ಕಲಾಪದಲ್ಲಿ ಶಿರಹಟ್ಟಿ ಮತಕ್ಷೇತ್ರದ




