ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಪೊಲೀಸ್ ಅತಿಥಿಯಾಗಿದ್ದಾನೆ.
ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲವು ವರ್ಷಗಳ ಹಿಂದೆ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಶಿಫ್ಟ್ ಆಗಿದೆ.
ಸಾಹಿಲ್ ಚಿಕ್ಕಂದಿನಿಂದಲೇ ಸೋದರ ಮಾವನ ಜೊತೆಯಲ್ಲಿ ಮುಂಬೈನಲ್ಲಿ ವಾಸ ಮಾಡುತ್ತಿದ್ದ. ಇದೇ ರೀತಿಯ ಪ್ರಕರಣದಲ್ಲಿ ಸಾಹಿಲ್‌ನನ್ನು ಈ ಹಿಂದೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು. ಚಿನ್ನ ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿಯೇ ಬಂಧಿತನಾಗಿದ್ದ. ಚಿನ್ನದ ವ್ಯಾಪಾರಿಗಳ ಜೊತೆ ನಂಟು ಇರುವ ಕಾರಣ ಚಿನ್ನದ ಮಾರಾಟದ ಜವಾಬ್ದಾರಿಯೂ ಸಾಹಿಲ್ ಮೇಲಿತ್ತು. ಸಾಹಿಲ್ ಜೈನ್ ವಶಕ್ಕೆ ಪಡೆದಿರುವ ಡಿಆರ್‌ಐ ಅಧಿಕಾರಿಗಳು ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್‌ಗೂ ನೋಟೀಸ್ ಕೊಟ್ಟಿದ್ದಾರೆ.