ಉತ್ತರ ಪ್ರದೇಶದ ಬರೇಲಿಯಲ್ಲಿ 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆಯಾಗಿರುವ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾಗಿ ಹೆರಿಗೆಯಾದ ಅರ್ಧ ಗಂಟೆಯಲ್ಲಿ ಮಗು ಮೃತಪಟ್ಟಿದೆ.
ಆರೋಪಿ ರಶೀದ್ (31) ಬಾಲಕಿಯನ್ನು ಬೆದರಿಸಿ ನಿರಂತರ ಅತ್ಯಾಚಾರ ಎಸಗಿದ್ದು, ಏಳು ತಿಂಗಳ ಹಿಂದೆ ರಶೀದ್ ಬಾಲಕಿಯನ್ನು ಹಣ್ಣು ಕೊಡಿಸುವುದಾಗಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಲೈಂಗಿಕ ಸಂಬಂಧ ಹೊಂದುವಂತೆ ಅವಳನ್ನು ಬ್ಲ್ಯಾಕ್‌ಮೇಲ್ ಮಾಡಲು ವೀಡಿಯೊ ಮಾಡಿಕೊಂಡಿದ್ದ ಎಂದು ಬಾಲಕಿಯ ಸೋದರ ಹೇಳಿದ್ದಾನೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆ ಏಳು ತಿಂಗಳ ಗರ್ಭಿಣಿ ಎಂಬುದು ಪತ್ತೆಯಾಗಿದೆ. ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿ ಅರ್ಧ ಗಂಟೆಯ ಬಳಿಕ ಮಗು ಮೃತಪಟ್ಟಿದೆ.
ಆರೋಪಿ ರಶೀದ್ ವಿರುದ್ಧ ದೂರು ದಾಖಲಾಗಿದ್ದು, ಬಂಧಿಸಲಾಗಿದೆ. ಮಗುವಿನಿಂದ ಡಿಎನ್‌ಎ ಮಾದರಿಯನ್ನು ತೆಗೆದುಕೊಳ್ಳಲಾಗಿದ್ದು, ಆರೋಪಿಯ ಡಿಎನ್‌ಎ ಜೊತೆ ಹೊಂದಾಣಿಕೆಯಾಗುವುದೇ ಎಂದು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ವಾಬ್‌ಗಂಜ್ ಠಾಣೆಯ ಅಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.