Menu

ಅಪ್ರಾಪ್ತ ವಯಸ್ಕ ಸೋದರಿಯರ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಸಿಂಧನೂರು ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಸೋದರಿಯರಿಬ್ಬರ ಮೇಲೆ ಬಾಬು ಎಂಬಾತ ಅತ್ಯಾಚಾರ ನಡೆಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನಗರದ ವಾರ್ಡ್ ನಂ.30 ಬಳಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಗೀತಾ ಐಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಬಾಬು ಎಂಬಾತ ಅತ್ಯಾಚಾರ ಆರೋಪಿ. ಬಾಲಕಿಯರು ಶಾಲೆ ಮುಗಿಸಿಕೊಂಡು ಬಂದವರು ಸಂಜೆ ಮನೆಯ ಹತ್ತಿರ ಆಟ ಆಡುತ್ತಿರುವಾಗ ಆರೋಪಿ ಅವರನ್ನು ಅವರ ಮನೆಯ ಒಳಗಡೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.  ಬಾಲಕಿಯರ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಆರೋಪಿಯು ಅವರಿದ್ದ ಶೆಡ್‌ ಮನೆಯಲ್ಲಿ ಈ ಕೃತ್ಯ ಎಸಗಿದ್ದಾನೆ.

ಈ ವಿಷಯ ಯಾರಿಗಾದರೂ ಹೇಳಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಬಾಲಕಿಯರಿಗೆ ಆರೋಪಿ ಬೆದರಿಕೆ ಹಾಕಿದ್ದ, ಆತನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿವೈಎಸ್ಪಿ ಚಂದ್ರಶೇಖರ ಹಾಗೂ ನಗರ ಠಾಣೆಯ ಪಿಐ ವೀರಾರೆಡ್ಡಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *