ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗುತ್ತಿರುವ ಆರೋಪದಡಿ ಕರ್ನಾಟಕದ ವ್ಯಕ್ತಿಯ ವಿರುದ್ಧ ಪುಣೆಯ ವಿಶ್ರಾಂತವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಿಮಲ್ ಹೆವನ್ ಎಂಬ ಸರ್ಕಾರೇತರ ಸಂಸ್ಥೆಯ ಸದಸ್ಯರಾದ ರಾಗಿಣಿ ಮೋರ್, ಮೃದುಲಾ ವಾಘ್ಮೋರೆ ಮತ್ತು ಇತರರು ಕರ್ನಾಟಕ ಮೂಲದ ಕಾರ್ಮಿಕನೊಬ್ಬ ಈ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಆರೋಪಿಯನ್ನು 35 ವರ್ಷದ ಮಲ್ಲಪ್ಪ ಹೊಸಮನಿ ಎಂದು ಗುರುತಿಸಲಾಗಿದ್ದು, ಟಿಂಗ್ರೆ ನಗರದಲ್ಲಿ ನಾಯಿಯನ್ನು ಟಿನ್ ಶೆಡ್‌ಗೆ ಕರೆದೊಯ್ದು ನಂತರ ಅದರ ಮೇಲೆ ಹಲ್ಲೆ ನಡೆಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯನ್ನು ಗಮನಿಸಿದ ಪ್ರತ್ಯಕ್ಷದರ್ಶಿಯೊಬ್ಬರು ತಕ್ಷಣವೇ ಎನ್‌ಜಿಒ ಸದಸ್ಯರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಧಾವಿಸಿದ್ದರು. ಆರೋಪಿ ಬೀದಿ ನಾಯಿಯ ಬಳಿಗೆ ಬಂದು ಬಲವಂತವಾಗಿ ಹತ್ತಿರದ ಟಿನ್ ಶೆಡ್‌ಗೆ ಕರೆದೊಯ್ಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆರೋಪಿ ಈ ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಪುಣೆಯ ಹಂಡೇವಾಡಿಯ ವ್ಯಕ್ತಿಯೊಬ್ಬ ಪಶ್ಚಿಮ ಬಂಗಾಳ ಮೂಲದ ಅಲಿಮುದ್ದೀನ್ ಅಮಿನಾಲ್ ಶೇಖ್ ತನ್ನ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದರು. ವಿಚಾರಣೆಯ ಸಮಯದಲ್ಲಿ ಶೇಖ್ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.