ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದಿನಾರು ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ರಮೇಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ವಯಸ್ಕ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವರ್ಷದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ. ಅತ್ಯಾಚಾರದ ನಂತರ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ. ಅಕಸ್ಮಾತ್ ಯಾರ ಮುಂದಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂಬುದಾಗಿ ಸಂತ್ರಸ್ತೆ ಹೇಳಿದ್ದಾಳೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಡಿಎನ್‌ಎ ಪರೀಕ್ಷೆ ಒಳಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ.