ಪಹಲ್ಗಾಮ್ ದಾಳಿ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರೀಯ ಕನ್ನಡ ರಾಜ್ಯೋತ್ಸವ ನಡೆಸಲು ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಕನ್ನಡಿಗರಿಂದ ಪೂರ್ವಭಾವಿ ತಯಾರಿ ಆರಂಭಗೊಂಡಿದೆ. ಬಿಬಿಎಂಪಿ ಅಧಿಕಾರಿ ಮತ್ತು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನವೆಂಬರ್ 22 ರಂದು ಕನ್ನಡ ರಾಜ್ಯೋತ್ಸವ ನಡೆಸಲು ತೀರ್ಮಾನಿಸ ಲಾಗಿದೆ. ಪಹಲ್ಗಾಮ್‌ನಲ್ಲಿ ಪೂರ್ವಭಾವಿ ಸಿದ್ಧತೆ ನಡೆಯುತ್ತಿದೆ.
ಕರ್ನಾಟಕದ ಮೂವರು ಸೇರಿ ಪಹಲ್ಗಾಮ್‌ನಲ್ಲಿ ಭಾರತೀಯರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಆ ನೆಲದಲ್ಲೇ ಈ ವರ್ಷ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ರಾಷ್ಟ್ರೀಯ ಕನ್ನಡ ರಾಜ್ಯೋತ್ಸವ ಆಯೋಜನೆಗೊಂಡಿದೆ. 700 ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಕಳೆದ ವರ್ಷ ಗಂಗಾನದಿ ತೀರದ ಹರಿದ್ವಾರ- ಹೃಷಿಕೇಶದಲ್ಲಿ ನಡೆಸಲಾಗಿತ್ತು.
ಬಿಬಿಎಂಪಿ ಅಧಿಕಾರಿ ಮತ್ತು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಒಂದೊಂದು ವರ್ಷ ಒಂದೊಂದು ಕಡೆ ದೇಶ ಅಥವಾ ವಿದೇಶದಲ್ಲಿ ಕನ್ನಡ ರಾಜ್ಯೋತ್ಸವ ಆಯೋಜಿಸುತ್ತ ಬರಲಾಗುತ್ತಿದೆ.