ಮಾದಕ ದ್ರವ್ಯ ಬಳಕೆ ಮಾಡುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರಿನಿಂದ ಬಂದಿದ್ದ ಮಹಿಳೆಯರು ಸೇರಿದಂತೆ 130 ಮಂದಿಯನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ದಾಳಿ ಮಾಡಿದ್ದಾರೆ.
ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದೆ.
ಬಂಧಿತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಬಂಧಿತ ಹೋಮ್ ಸ್ಟೇ, ಸುಹಾಸ್ ಗೌಡ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.
ರೇಟ್ ಪಾರ್ಟಿಯಲ್ಲಿ ಮಾದಕ ದ್ರವ್ಯ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.


