ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಸಮಿತಿ ನೀಡಿದ ವರದಿಯಲ್ಲಿ ಕಾಲ್ತುಳಿತ ದುರಂತಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಆರ್ ಸಿಬಿ ಹಾಗೂ ಆರ್ ಸಿಬಿ ಮ್ಯಾನೇಜ್ ಮೆಂಟ್ ಸಂಸ್ಥೆಯಾದ ಡಿಎನ್ ಎ ಹೊಣೆ ಎಂದು ಆರೋಪಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುನ್ಹಾ ಸಮಿತಿ ಕೆಲವು ದಿನಗಳ ಹಿಂದೆಯಷ್ಟೇ ವರದಿ ಮಂಡಿಸಿದ್ದು, ವರದಿಯನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಚರ್ಚೆಯ ನಂತರ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಇದೇ ವೇಳೆ ಕಾಲ್ತುಳಿತ ದುರಂತದಲ್ಲಿ ಪೊಲಿಸ್ ಅಧಿಕಾರಿಗಳ ನಿರ್ಲಕ್ಷ್ಯವೂ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದರಿಂದ ಪೊಲಿಸ್ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಪೊಲಿಸ್ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸಲಹೆ ನೀಡಿದ್ದಾರೆ. ಸದ್ಯ, ಪೊಲಿಸ್ ಅಧಿಕಾರಿಗಳ ವಿರುದ್ದವು ಕ್ರಿಮಿನಲ್ ಮೊಕದ್ದಮೆ ದಾಖಲಾಗುವ ಸಾಧ್ಯತೆ ಇದೆ.