ಹದಿನೆಂಟು ವರ್ಷದ ಬಳಿಕ ಐಪಿಎಲ್ ಕಪ್ ಗೆದ್ದು ಬೀಗಿರುವ ಆರ್‌ಸಿಬಿ ಇಂದು (ಬುಧವಾರ) ಸಂಜೆ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸಲಿದೆ. ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಫೈನಲ್ ಪಂದ್ಯ ಗೆದ್ದ ಬಳಿಕ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸಲಾಗುವುದು ಎಂದು ತಿಳಿಸಿದ್ದರು. ಅಭಿಮಾನಿಗಳನ್ನು 12ನೇ ಸೇನೆ ಎಂದೇ ಗೌರವಿಸುವ ಆರ್‌ಸಿಬಿ ಈ ಗೆಲುವಿನ ಕಿರೀಟ ಅಭಿಮಾನಿಗಳಿಗೆ ಸೇರಿದ್ದು ಎಂದು ಹೇಳಿದೆ.
ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ವಿರಾಟ್ ಕೊಹ್ಲಿ ಅವರು, ಎಬಿಡಿ ವಿಲಿಯರ್ಸ್, ಕ್ರಿಸ್ ಗೇಲ್ ಅವರೊಡನೆ ʻಈ ಸಲ ಕಪ್ ನಮ್ದುʼ ಎಂದು ಹೇಳಿಸಿದ ಕ್ಷಣ ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿತು. ಆರ್‌ಸಿಬಿಗೆ ಗೆಲುವು ಪಕ್ಕಾ ಎಂದು ತಿಳಿಯುತ್ತಿದ್ದಂತೆ ವಿರಾಟ್ ಕೊಹ್ಲಿ ಮೈದಾನದಲ್ಲಿ ಗಳಗಳನೆ ಅಳಲು ಶುರು ಮಾಡಿದ್ದರು. 18 ವರ್ಷಗಳ ನೆನಪುಗಳೊಂದಿಗೆ ಭಾವುಕರಾದರು. ಆಗ ಪತ್ನಿ ಅನುಷ್ಕಾ ಶರ್ಮಾ ಕೊಹ್ಲಿಯನ್ನ ಅಪ್ಪಿಕೊಂಡು ಭಾವುಕರಾದರು.