Menu

RCB Victory tragedy: ಪಿಐಎಲ್‌ ವಿಚಾರಣೆ ಜೂನ್‌ 12ಕ್ಕೆ ಮುಂದೂಡಿದ ಹೈಕೋರ್ಟ್‌

ಆರ್‌ಸಿಬಿ ವಿಜಯೋತ್ಸವ ದುರಂತದಲ್ಲಿ ಹನ್ನೊಂದು ಜನರ ಸಾವು ಹಾಗೂ ಹಲವರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ಸ್ವಯಂ ಪ್ರೇರಿತವಾಗಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜೂನ್ 12ಕ್ಕೆ ಮುಂದೂಡಿದೆ. ಸರ್ಕಾರದಿಂದ ವರದಿ ಬಂದ ನಂತರ ತೀರ್ಮಾನ ಪ್ರಕಟಿಸುವುದಾಗಿ ಹೇಳಿದೆ.

ಈ ದುರಂತದ ಬಗ್ಗೆ ವರದಿ ನೀಡುವಂತೆ ಕೋರಿ ಕಾಂಗ್ರೆಸ್‌ ಹೈ ಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರನ್ನು ದೆಹಲಿಗೆ ಕರೆಸಿಕೊಂಡಿದೆ. ಜೂನ್ 5ರಂದು ನಡೆದ ವಿಚಾರಣೆಯಲ್ಲಿ ಹೈಕೋರ್ಟ್, ಸರ್ಕಾರಕ್ಕೆ ಘಟನೆಯ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಸರ್ಕಾರ ಯಾವುದೇ ವರದಿ ಸಲ್ಲಿಸಿಲ್ಲ. ಸರ್ಕಾರದಿಂದ ವರದಿ ಏಕೆ ಸಲ್ಲಿಕೆಯಾಗಿಲ್ಲ ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ. ಮ್ಯಾಜಿಸ್ಟೀರಿಯಲ್ ಮತ್ತು ನ್ಯಾಯಾಂಗ ತನಿಖೆಯ ವರದಿಗಳನ್ನು ಸಲ್ಲಿಸುವುದಾಗಿ ಭರವಸೆ ನೀಡಿದರು. ಒಂದು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಒಪ್ಪದ ಹೈಕೋರ್ಟ್ ಜೂನ್ 12ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ ರಾವ್ ಮತ್ತು ಸಿ.ಎಂ. ಜೋಶಿ ಅವರಿದ್ದ ಪೀಠವು
ಈ ವಿಚಾರಣೆ ನಡೆಸಿದೆ.

Related Posts

Leave a Reply

Your email address will not be published. Required fields are marked *