ಕೆಂಪುಕೋಟೆಗೆ ಆ .15 ವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ನವದೆಹಲಿ, ಜುಲೈ 21  ಕೊರೋನಾ ಹಿನ್ನಲೆ , ಭಯೋತ್ಪಾದಕರ ಬೆದರಿಕೆ ಕರೆ ಹಿನ್ನೆಲೆಯಲ್ಲಿ, ದೆಹಲಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು ಇಂದಿನಿಂದ ಆಗಸ್ಟ್ 15 ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಪೊಲೀಸರು ನೀಡಿದ ವರದಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಭಾರತೀಯ ಪುರಾತತ್ವ ಸಂಸ್ಥೆ ಹೇಳಿದೆ.
ಜುಲೈ 21 ರಿಂದ ಮುಂದಿನ ತಿಂಗಳ 15ರ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಮುಗಿಯುವ ತನಕ ಕೆಂಪುಕೋಟೆಗೆ ಯಾರೊಬ್ಬರ ಪ್ರವೇಶ ಇರುವುದಿಲ್ಲ ಎಂದು ಸೂಚಿಸಲಾಗಿದೆ.
ಭದ್ರತೆ ದೃಷ್ಟಿಯಿಂದ ಜುಲೈ 15ರಿಂದ ಆಗಸ್ಟ್ 15ರವರೆಗೂ ಕೆಂಪುಕೋಟೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸುವಂತೆ ದೆಹಲಿ ಪೊಲೀಸರ ಮುನ್ನೆಚ್ಚರಿಕೆ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

 

,

Leave a Reply

Your email address will not be published. Required fields are marked *