Menu

ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

ಪ್ರಥಮ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಮಲೀಲಾ ಮೈದಾನದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಇತರ ಕೇಂದ್ರ ಸಚಿವರು ಪಾಲ್ಗೊಂಡಿದ್ದರು.

ರಾಜ್ಯಪಾಲ ವಿ.ಕೆ ಸಕ್ಸೆನಾ ಪ್ರಮಾಣ ವಚನ ಬೋಧಿಸಿದರು. ಸಚಿವರಾಗಿ ಪರ್ವೇಶ್ ಸಾಹಿಬ್ ಸಿಂಗ್, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರಜ್ ಸಿಂಗ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು. ಮಾಜಿ ಸಿಎಂ ಪುತ್ರ ಪರ್ವೇಶ್‌ ವರ್ಮಾ ಅವರನ್ನು ಡಿಸಿಎಂ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿದೆ.

ರೇಖಾ ಗುಪ್ತಾ ದೆಹಲಿಯ 4ನೇ, ಬಿಜೆಪಿಯ 2ನೇ ಮಹಿಳಾ ಸಿಎಂ ಆಗಿ ಹೊರ ಹೊಮ್ಮಿದ್ದಾರೆ. ಇವರು ಹಿಂದೆ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿದ್ದರು. ಈ ಮೊದಲು ಮಹಿಳಾ ಸಿಎಂಗಳಾಗಿ ಬಿಜೆಪಿಯಿಂದ ಸುಷ್ಮಾ ಸ್ವರಾಜ್‌, ಕಾಂಗ್ರೆಸ್‌ನಿಂದ ಶೀಲಾ ದೀಕ್ಷಿತ್‌ ಹಾಗೂ ಎಎಪಿಯಿಂದ ಅತಿಶಿ ಕಾರ್ಯ ನಿರ್ವಹಿಸಿದ್ದರು.

Related Posts

Leave a Reply

Your email address will not be published. Required fields are marked *