ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ. ನಿರ್ದಿಷ್ಟ ಕಾರಣ ನೀಡದೆ ಭಾರತೀಯ ಕ್ರಿಕೆಟ್ ಮಂಡಳಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಬೆಂಗಳೂರಿನ ಪಂದ್ಯಗಳನ್ನು ರಾಜ್‌ಕೋಟ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.
ಆರ್‌ಸಿಬಿ ವಿಜಯೋತ್ಸವ ದುರಂತದ ಹಿನ್ನೆಲೆಯಲ್ಲಿ ಬಿಸಿಸಿಐ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ರಾಜ್‌ಕೋಟ್‌ನಲ್ಲಿ ನಡೆಯಲಿದೆ.
ಬೆಂಗಳೂರಿನಲ್ಲಿ ನಡೆಯಬೇಕಿರುವ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳನ್ನೂ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ ವುಮೆನ್ಸ್ ಒಡಿಐ ವರ್ಲ್ಡ್ಕಪ್ನ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬೇರೆ ಕಡೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.
ಮುಂಬರುವ ಟಿ20 ವಿಶ್ವಕಪ್ ಭಾರತದಲ್ಲಿ ಆಯೋಜನೆಗೊಳ್ಳಲಿದೆ. ಇತ್ತ 2026ರ ಟಿ20 ವಿಶ್ವಕಪ್ಗೆ ಬಿಸಿಸಿಐ ನಿಗದಿಪಡಿಸಿದ ಸ್ಟೇಡಿಯಂಗಳಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವೂ ಸೇರಿದೆ. ಟಿ20 ವಿಶ್ವಕಪ್ ಪಂದ್ಯದ ಆತಿಥ್ಯದ ಹಕ್ಕು ಕರ್ನಾಟಕ ಕ್ರಿಕೆಟ್ ಮಂಡಳಿಯ ಕೈ ತಪ್ಪಲಿದೆ ಎನ್ನಲಾಗುತ್ತಿದೆ.