Menu

ಖ್ಯಾತ ವಿದ್ವಾಂಸ ಡಾ.ಪಿ.ವಿ ನಾರಾಯಣ ನಿಧನ

dr. pv narayana

ಬೆಂಗಳೂರು: ಕನ್ನಡದ ಖ್ಯಾತ ವಿದ್ವಾಂಸ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಡಾ. ಪಿ ವಿ ನಾರಾಯಣ ಅವರು ನಗರದಲ್ಲಿ ನಿಧನ ಹೊಂದಿದ್ದಾರೆ.

ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ ಪಿ. ವಿ. ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಜಯನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಿ ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರದಲ್ಲಿ 1942ರ ಡಿ.18 ರಂದು ಜನಿಸಿದ ಅವರು, ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ನಲ್ಲಿ ಸ್ನಾತಕೋತ್ತರ ಪದವಿ ಹಾಗೂ ‘ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ. ಕನ್ನಡ. ಕನ್ನಡಿಗ ಮತ್ತು ಕರ್ನಾಟಕದ ಹೋರಾಟಗಾರಾಗಿ. ಮುಂಚೂಣಿಯಲ್ಲಿದ್ದರು.

ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯಕತತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ, ಪದ್ಮನೀ ಪರಿಣಯ, ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ, ಅಂತರ, ವಿಕಾಸ, ಶೋಧನೆ ನಿರ್ಧಾರ, ಧರ್ಮಕಾರಣ ಸೇರಿ ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.

Related Posts

Leave a Reply

Your email address will not be published. Required fields are marked *