ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆದೇಶಿಸಿದ ಬಳಿಕ ಪೊಲೀಸರು ಬಂಧನ ಕಾರ್ಯಪ್ರವೃತ್ತರಾಗಿದ್ದಾರೆ. ದರ್ಶನ್ ಆಪ್ತ ಪ್ರದೂಷ್‌ನನ್ನು ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಬಂಧಿಸಿದೆ.
ಪ್ರಮುಖ ಆರೋಪಿ ದರ್ಶನ್ ಇಂದು ಸಂಜೆ ಕೋರ್ಟ್‌ಗೆ ಹಾಜರಾಗುವುದಾಗಿ ಹೇಳಿದ್ದರೆ, ಆರೋಪಿ ಪವಿತ್ರಾ ಗೌಡರನ್ನು ಪೊಲೀಸರು ಮನೆಯಿಂದ ಯಾವುದೇ ಕ್ಷಣದಲ್ಲಿ ಬಂಧಿಸಬಹುದಾಗಿದೆ, ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಕೆಳಗಿಲ್ಲ. ಆರೋಪಿಗಳ ಬಂಧನ ಆದೇಶ ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹೇಳಿದ್ದಾರೆ.
ಆರೋಪಿಗಳ ಪರ ವಕೀಲರು ಕಾಲಾವಕಾಶ ಕೇಳದ ಕಾರಣ ಆರೋಪಿಗಳು ಇಂದೇ ಶರಣಾಗಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಮತ್ತೆ ಜೈಲು ಸೇರುವ ಆರೋಪಿಗಳಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸವಲತ್ತು ನೀಡುವಂತಿಲ್ಲ, ಸಾಮಾನ್ಯ ಕೈದಿಗಳಂಯೆತೇ ಉಪಚರಿಸುವಂತೆ ಕೋರ್ಟ್ ಆದೇಶದಲ್ಲಿ ಜೈಲು ಅಧಿಕಾರಿಗಳಿಗೆ ವಾರ್ನ್ ಕೂಡ ಮಾಡಿದೆ.