ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆರೋಪಿಗಳನ್ನು ವಾಪಸ್ ಜೈಲಿಗಟ್ಟಿದ ಬೆನ್ನಿಗೆ ಮತ್ತೊಂದು ಶಾಕ್ ಎದುರಾಗಿದೆ.
ಪ್ರಕರಣದ ತ್ವರಿತ ವಿಚಾರಣೆಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವಂತೆ ಮನವಿ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವಂತೆ ಸೋಮವಾರ ಪೊಲೀಸರು ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.
ಪ್ರಕರಣದ ತ್ವರಿತಗತಿತ ವಿಚಾರಣೆಗೆ ಸೂಚಿಸಿರುವ ಸುಪ್ರೀಂಕೋರ್ಟ್, ಆರು ತಿಂಗಳೊಳಗಾಗಿ ಟ್ರಯಲ್ ಮುಗಿಸುವಂತೆ ಸೂಚಿಸಿದೆ. ಹೀಗಾಗಿ ತ್ವರಿತಗತಿಯಲ್ಲಿ ಪ್ರಕರಣದ ಟ್ರಯಲ್ ಮುಗಿಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.
ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚನೆಗೆ ಸಂಬಂಧಿಸಿದ ಸಾಧಕ ಬಾಧಕಗಳ ಬಗ್ಗೆ ಪೊಲೀಸರು ಈಗಾಗಲೇ ಕಾನೂನು ಇಲಾಖೆ ಜೊತೆ ಚರ್ಚಿಸಿದ್ದಾರೆ.