ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ೧ ಆರೋಪಿಯಾಗಿರುವ ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹವಾಸಿಯಾಗಿ ಒಂದು ವರ್ಷವಾಗಿದ್ದು, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ.
ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸೋಮವಾರ ವಿಚಾರಣೆ ಬಂದಿತ್ತು, ಅರ್ಜಿ ಸಲ್ಲಿಸಿದ್ದು ಇಂದು ಅರ್ಜಿ ವಿಚಾರಣೆಗೆ ಬಂದಿದೆ. ಅರ್ಜಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಪ್ರಾಸಿಕ್ಯೂಷನ್ ಖಡಕ್ ವಾದ ಮಂಡಿಸುವ ಸಾಧ್ಯತೆ ಇದೆ. ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದ್ದು ಪ್ರಾಸಿಕ್ಯೂಷನ್ನಿಂದ ಆಕ್ಷೇಪ ವ್ಯಕ್ತವಾಗಿದೆ. 59ನೇ ಸೆಷನ್ಸ್ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಪರಪ್ಪನ ಅಗ್ರಹಾರದಲ್ಲಿ 30 ಮಂದಿ ಕೈದಿಗಳ ನಡುವೆ ಇದ್ದ ಪವಿತ್ರಾ ಗೌಡಗೆ ಆ ಬ್ಯಾರಕ್ನಿಂದ ಬಿಡುಗಡೆಯಾಗಿ ಮತ್ತೊಂದು ಬ್ಯಾರಕ್ಗೆ ಶಿಫ್ಟ್ ಆಗಿದ್ದಾರೆ. ಬ್ಯಾರಕ್ನಲ್ಲಿ ಹಲವು ಅಪರಾಧಿಗಳೊಂದಿಗೆ ಒಂದೇ ಶೌಚಾಲಯ ಬಳಸಬೇಕಾಗಿದೆ. ಕೈದಿಗಳು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ಸೌಲಭ್ಯ ಹಾಗೂ ಸ್ವಚ್ಛತೆ ಇರುವ ಬ್ಯಾರಕ್ಗೆ ವರ್ಗಾವಣೆ ಮಾಡುವಂತೆ ಪವಿತ್ರಾ ಗೌಡ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ತಾಯಿ ಆರೋಗ್ಯದ ಸಮಸ್ಯೆ, ಮಗಳ ಆರೈಕೆ, ತನಗೆ ಆರೋಗ್ಯ ಸಮಸ್ಯೆ ಇರುವ ಕಾರಣ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಅರ್ಜಿಯಲ್ಲಿ ಕೋರಿದ್ದಾರೆ. ತನ್ನ ಮೇಲಿನ ಆರೋಪಗಳೆಲ್ಲವು ಸುಳ್ಳು ಎಂದು ಅರ್ಜಿಯಲ್ಲಿ ಪವಿತ್ರಾ ಗೌಡ ಹೇಳಿದ್ದರು.


