ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಮಂದಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರಿಯುತ್ತಾ ಎಂಬುದು ಮುಂದಿನ ವಿಚಾರಣೆಯಲ್ಲಿ ತೀರ್ಮಾನವಾಗಲಿದೆ. ಲಿಖಿತ ವಾದ ಸಲ್ಲಿಸಿ ಎಂದು ಇತರ ಆರೋಪಿಗಳಿಗೆ ಹೇಳಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಜು. 17ರಂದು ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ಜಾಮೀನು ನೀಡಲು ಹೈಕೋರ್ಟ್ ಪರಿಗಣಿಸಿದ ಕಾರಣಗಳು ಸಮಂಜಸವಾಗಿಲ್ಲ ಎಂದು ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜು.22ಕ್ಕೆ ಮುಂದೂಡಿಕೆ ಮಾಡಿತ್ತು.
ಜು.22ರಂದು ದರ್ಶನ್ ಪರ ಕಪಿಲ್ ಸಿಬಲ್ ವಾದಿಸಬೇಕಿತ್ತು. ಕಪಿಲ್ ಸಿಬಲ್ ಬಾರದೇ ಎರಡು ದಿನ ಕಾಲಾವಕಾಶ ಕೇಳಲಾಗಿತ್ತು. ಜು. 17ರಂದು ಸರ್ಕಾರದ ವಾದ ಮುಗಿದಿದ್ದು, ದರ್ಶನ್ ಪರ ವಕೀಲ ಸಿದ್ದಾರ್ಥ್ ದವೆ ಪ್ರತಿವಾದ ಮಂಡಿಸಿದ್ದರು.
ನಟ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸತ್ತು. ರಾಜ್ಯ ಸರ್ಕಾರ ಪರ ವಕೀಲರ ವಾದ ಸುಪ್ರೀಂಕೋರ್ಟ್ ಆಲಿ ದಾಖಲೆಗಳನ್ನು ಸ್ವೀಕರಿಸಿದ್ದು, ಇಂದು ದರ್ಶನ್ ಪರ ವಕೀಲರ ವಾದ ಆಲಿಸಿದೆ. ರಾಜ್ಯ ಪೊಲೀಸರ ಪರ ವಕೀಲ ಪ್ರಸನ್ನ ಕುಮಾರ್ ಸುಪ್ರೀಂಕೋರ್ಟ್‌ನಲ್ಲಿ ಇದ್ದರು.