ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ನ್ಯಾಯಾಲಯ ಇಂದು (ಬುಧವಾರ) ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.
ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಇಂದು ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಿದೆ. ದೂರುದಾರ ಸ್ನೇಹಮಹಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ ಹೋಗುತ್ತದೆ. ಆದೇಶದ ನಂತರ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗವೂ ನಡೆಯುತ್ತದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಪತ್ನಿ ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪವಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ ಅಧಿಕಾರಿಗಳು ಸಿಎಂ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ. ಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.