ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಯಡಿಯೂರಪ್ಪ

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಯಡಿಯೂರಪ್ಪ

ಬೆಂಗಳೂರು: ಮೊಟ್ಟ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆಯ ಸುಳಿವು ನೀಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನೀಡುವ ಸೂಚನೆ ಮೇರೆಗೆ ಜುಲೈ 26ರ ನಂತರ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ‌ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ‌ ಹಾಗೂ ಜೆಪಿ ‌ನಡ್ಡಾ ನನ್ನ ಬಗ್ಗೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಜುಲೈ 26 ಕ್ಕೆ ನಾನು ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ನಂತರ ಕೇಂದ್ರದ ನಾಯಕರು ನೀಡಿದ ಸೂಚನೆ ಪಾಲಿಸಲು ಸಿದ್ದ ಎಂದಿದ್ದಾರೆ.

ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ, ಜುಲೈ 25ಕ್ಕೆ ಹೈಕಮಾಂಡ್ ನಿಂದ ಸೂಚನೆ ಬರುತ್ತದೆ, ಅದರಂತೆ ನಡೆದುಕೊಳ್ಳುತ್ತೇನೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಮುಂದಿನ ಎರಡು ವರ್ಷ ಪಕ್ಷಕ್ಕಾಗಿ ಸಾಕಷ್ಟು ದುಡಿದು ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಹೇಳಿದ್ದಾರೆ.

,

Leave a Reply

Your email address will not be published. Required fields are marked *