ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

ಬೆಂಗಳೂರು, ಜ 23 (ಉದಯಕಾಲ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Leave a Reply

Your email address will not be published. Required fields are marked *