Menu

ಆರ್‌ಜಿ ಕಾರ್ ಹತ್ಯಾಕಾಂಡ: ಮೇಲ್ಮನವಿಗೆ ಹೈಕೋರ್ಟ್ ಅಸ್ತು

sanjay

ಕೋಲ್ಕತ್ತಾ: ಆರ್ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಆಜೀವ ಜೈಲು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅನುಮತಿ ನೀಡಿದೆ.

ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್ಗೆ ಮರಣದಂಡನೆ ವಿಧಿಸುವಂತೆ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದರು.

ಸಿಯಾಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸೋಮವಾರ ನೀಡಿದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಹೈಕೋರ್ಟಿನ ಅನುಮತಿ ಕೋರಿತ್ತು.

ಸರ್ಕಾರಿ ಸ್ವಾಮ್ಯದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂಬ ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು, ಇದು “ಅಪರೂಪದಲ್ಲಿ ಅಪರೂಪ” ಅಪರಾಧವಲ್ಲ ಎಂದು ಹೇಳಿ, ಆಜೀವ ಸಜೆ ವಿಧಿಸಿತ್ತು. ನ್ಯಾಯಾಲಯವು ರಾಯ್ಗೆ 50,000 ರೂ. ದಂಡ ವಿಧಿಸಿದ್ದು, ಮೃತ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಸಿಎಂ ಮಮತಾ ದಿಗ್ಭ್ರೆಮೆ

ನ್ಯಾಯಾಲಯದ ತೀರ್ಪಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರೆ, ಮರಣದಂಡನೆ ಖಚಿತಪಡಿಸಿಕೊಳ್ಳುತ್ತಿದ್ದೇವೆ ಎಂದು ಪ್ರತಿಪಾದಿಸಿದ್ದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ನೀಡಿದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ತನಿಖೆಯನ್ನು ರಾಜ್ಯ ಪೊಲೀಸರಿಂದ ಬಲವಂತವಾಗಿ ತೆಗೆದುಕೊಳ್ಳಲಾಗಿದೆ ಎಂದು ಪ್ರತಿಪಾದಿಸಿದರು.
ಮಮತಾ ಬ್ಯಾನರ್ಜಿ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಅನ್ನು ಟೀಕಿಸಿದರು.

ಮೊದಲ ದಿನದಿಂದಲೇ ನಾವೆಲ್ಲರು ಮರಣದಂಡನೆಗೆ ಒತ್ತಾಯಿಸಿದ್ದೆವು, ಆದರೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ನಾವು ಇನ್ನೂ ನಮ್ಮ ಬೇಡಿಕೆಗೆ ಬದ್ಧರಾಗಿದ್ದೇವೆ.

ಆರ್ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಸಂಜಯ್ ರಾಯ್ನನ್ನು ಅಪರಾಧಿ ಎಂದು ಘೋಷಿಸಲಾಗಿತ್ತು.

ನಂತರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಿಯಾಲ್ಡಾ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿತು. ಇಂಥಾ ಘೋರ ಅಪರಾಧಕ್ಕೆ ಕೇವಲ ಜೀವಾವಧಿ ಶಿಕ್ಷೆಯೇ ಎಂದು ಕೇಳುತ್ತಾ ಜನರು ರಾಷ್ಟ್ರವ್ಯಾಪಿ ಪ್ರತಿಭಟನೆಗಿಳಿದಿದ್ದಾರೆ.

Related Posts

Leave a Reply

Your email address will not be published. Required fields are marked *