Menu

ಸಂಡೂರಿನಲ್ಲಿ ರಸ್ತೆ ಅಪಘಾತ: ನಾಲ್ವರ ಸಾವು

ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಅಸು ನೀಗಿದ್ದಾರೆ.

ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್​ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ, ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬರಬೇಕಿದೆ.

 

Related Posts

Leave a Reply

Your email address will not be published. Required fields are marked *