ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಭಾನುವಾರ ರಾತ್ರಿ ಎರಡು ಬೈಕ್‌ಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್ (36) ಮತ್ತು ವೆಂಕಟಧನಶೆಟ್ಟಿ (64), ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24) ಮೃತಪಟ್ಟವರು.
ವಿಷ್ಣು ಎನ್. ನಾಯ್ಕ್ ಶಿರಾ ನಗರದಿಂದ ತಮ್ಮ ಸ್ವಗ್ರಾಮವಾದ ಎಮ್ಮೇರಹಳ್ಳಿ ತಾಂಡಕ್ಕೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಹೊಂಡಾ ಆಕ್ಟಿವಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಅಸು ನೀಗಿದ್ದು, ವಿಷ್ಣು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿರಾ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.