ತಮ್ಮ ಮತ ಮಾರಾಟವಾಗಿದ್ದಕ್ಕೆ ಆರ್.ಆರ್. ನಗರ ಕ್ಷೇತ್ರದ ಜನರಲ್ಲಿ ಆಕ್ರೋಶ ಮೂಡಿದೆ: ಡಿ.ಕೆ. ಶಿವಕುಮಾರ್

dk shivakumar

ಬೆಂಗಳೂರು:

‘ತಾವು ಹಿಂದೆ ಚಲಾಯಿಸಿದ ಮತಗಳನ್ನು ಗೆದ್ದ ಅಭ್ಯರ್ಥಿ ಮಾರಾಟ ಮಾಡಿಕೊಂಡಿದ್ದಕ್ಕೆ ರಾಜರಾಜೇಶ್ವರಿ ಕ್ಷೇತ್ರದ ಮತದಾರರು ಆಕ್ರೋಶಗೊಂಡಿದ್ದು, ಮುಂದಿನ ತಿಂಗಳು 3ನೇ ತಾರೀಖಿನಂದು ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕೆಪಿಸಿಸಿ ವಕ್ತಾರರು ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ವೀಕ್ಷಕರ ಸಭೆ ನಡೆಸುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ‘ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತಿದೆ. ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿದೆ. ನಾವು ಕೊಟ್ಟ ಮತವನ್ನು ಮಾರಿಕೊಳ್ಳಲಾಗಿದೆ ಎಂದು ಜನರು ಆಕ್ರೋಶಗೊಂಡಿದ್ದಾರೆ’ ಎಂದರು.

Leave a Reply

Your email address will not be published. Required fields are marked *