Menu

18430.44 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆ, ರಾಜ್ಯದ 15032 ಜನರಿಗೆ ಉದ್ಯೋಗ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ಗದರಾಮಯ್ಯ ಅವರು, , ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು  ಮಾಹಿತಿ ನೀಡಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ  ನಡೆದ ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1982 ಉದ್ಯೋಗ ಸೃಷ್ಟಿಯಾಗುತ್ತಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,  ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *