Thursday, January 30, 2025
Menu

ಬೆಳಗಾವಿ ಸಮಾವೇಶದಲ್ಲಿ ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಕೆಶಿ

ಬೆಳಗಾವಿಯಲ್ಲಿ ನಡೆದ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿಯ  ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್  ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಜನವರಿ 21 ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷದ  ಕೆಂಚಪ್ಪ  ಕುಸಿದು ಬಿದ್ದು ಮೃತಪಟ್ಟಿದ್ದರು. ಕೆಂಚಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿ ಕೆ ಶಿವಕುಮಾರ್ , ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

 

Related Posts

Leave a Reply

Your email address will not be published. Required fields are marked *